ಪಟ್ಟಭದ್ರರ ಗುರುತಿಸಿ ಬರೆದು, ಮಟ್ಟಹಾಕಿ: ಸಿಎಂ
Feb 04 2024, 01:30 AM ISTಸ್ವಾತಂತ್ರ್ಯ ಪೂರ್ವದ ಪತ್ರಿಕೋದ್ಯಮದಲ್ಲಿ ದೇಶಕ್ಕೆ ಸ್ವಾತಂತ್ರ್ಯ ತರಬೇಕು ಎನ್ನುವ ಆಶಯ ಪ್ರಧಾನವಾಗಿ ಕೆಲಸ ಮಾಡಿತ್ತು. ಸ್ವಾತಂತ್ರ್ಯ ನಂತರ ಪ್ರಜಾಪ್ರಭುತ್ವವನ್ನು ಕಾಯುವ, ರಕ್ಷಿಸುವ ಆಶಯ ಪ್ರಮುಖವಾಗಿದೆ ಎಂದರು. ಜನ ಸಾಮಾನ್ಯರು ಪತ್ರಿಕಾ ವೃತ್ತಿ ಮೇಲೆ ಬಹಳ ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಆ ನಿರೀಕ್ಷೆಗಳು ಹುಸಿಯಾಗದಂತೆ ಪತ್ರಕರ್ತರು ವೃತ್ತಿಪರತೆ ಬೆಳೆಸಿಕೊಳ್ಳಬೇಕು. ಈಗ ತಂತ್ರಜ್ಞಾನನ, ವಿಜ್ಞಾನ ಬಹಳ ಬೆಳೆದಿದ್ದು ಇದರ ಪ್ರಯೋಜನವನ್ನು ಪತ್ರಿಕಾವೃತ್ತಿ ಬಳಸಿಕೊಳ್ಳಬೇಕಿದೆ.