ಸಮಾಜದಲ್ಲಿ ಅಸಮಾನತೆಗೆ ನಾವು ಕಾರಣರಲ್ಲ. ಬಹುತ್ವ ಸಮಾಜವನ್ನು ದೂರ ಇಟ್ಟಿರುವುದು, ಚಾತುವರ್ಣ ವ್ಯವಸ್ಥೆಯೂ ಸಹ ಅಸಮಾನತೆಗೆ ಕಾರಣ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು.
ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಬಣದವರು ಆಂತರಿಕ ಪೈಪೋಟಿ ನಡೆಸುತ್ತಿದ್ದಾರೆ. ಇದಕ್ಕಾಗಿ ಶಾಸಕರನ್ನು ಖರೀದಿ ಮಾಡಲು ಎರಡೂ ಬಣದವರು ಭ್ರಷ್ಟಾಚಾರದಲ್ಲಿ ತೊಡಗಿದ್ದಾರೆ- ಪ್ರಹ್ಲಾದ್ ಜೋಶಿ
ಪ್ರಮುಖ ವಿಧೇಯಕಗಳ ಕುರಿತು ಚರ್ಚಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಷ್ಟ್ರಪತಿಗಳ ಖುದ್ದು ಭೇಟಿಗೆ ದೆಹಲಿಗೆ ತೆರಳಲಿದ್ದಾರೆ.
ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್ ಅವರ ಹುಟ್ಟುಹಬ್ಬದ ಪ್ರಯುಕ್ತ ಸರಕಾರಿ ಶಾಲೆ ಮಕ್ಕಳು ಮತ್ತು ಬಿಜೈ ಕಾಪಿಕಾಡ್ ಅಂಗನವಾಡಿ ಕೇಂದ್ರದ ಮಕ್ಕಳು ಹೊಸ ಬಟ್ಟೆ ಧರಿಸಿ, ಕೇಕ್ ಕತ್ತರಿಸುವ ಮೂಲಕ ಸಂಭ್ರಮಿಸಿದರು.
ರಾಜ್ಯ ಸರ್ಕಾರದ ವಸತಿ ಯೋಜನೆಗಳಲ್ಲಿ ಅಲ್ಪಸಂಖ್ಯಾತ ಸಮುದಾಯದವರಿಗೆ ಮೀಸಲಾತಿ ಪ್ರಮಾಣ ಶೇ.15ಕ್ಕೆ ಹೆಚ್ಚಳ ಅಲ್ಪಸಂಖ್ಯಾತರ ಕಲ್ಯಾಣಕ್ಕಾಗಿ ಪ್ರಧಾನ ಮಂತ್ರಿಗಳ 15 ಅಂಶಗಳ ಕಾರ್ಯಕ್ರಮ(2019)ದ ಆಧಾರದ ಮೇಲೆ ತೆಗೆದುಕೊಂಡ ತೀರ್ಮಾನ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ರಾಜ್ಯದಲ್ಲಿ ಮಾವು ದರ ಕುಸಿತ, ಮಾವು ಬೆಳೆಗಾರರಿಗೆ ಆಗಿರುವ ನಷ್ಟದ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ವಿಸ್ತೃತ ಚರ್ಚೆ ನಡೆದಿದ್ದು, ಪರಿಹಾರ ನೀಡುವಂತೆ ಕೇಂದ್ರ ಕೃಷಿ ಸಚಿವರೊಂದಿಗೆ ಚರ್ಚಿಸಲು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.