ಭಿನ್ನಾಭಿಪ್ರಾಯ ಮರೆತು ಒಗ್ಗಟ್ಟಾಗಿ ಮಾಜಿ ಸಿಎಂ ಎಚ್‌ಡಿಕೆ ಗೆಲ್ಲಿಸೋಣ
Apr 01 2024, 12:45 AM ISTಬಿಜೆಪಿ-ಜೆಡಿಎಸ್ ಮೈತ್ರಿ ಹಾಲು ಜೇನು ಇದ್ದ ರೀತಿ. ಎರಡು ಪಕ್ಷದ ಕಾರ್ಯಕರ್ತರು ಒಂದು ಕುಟುಂಬವಿದ್ದಂತೆ. ಕುಮಾರಸ್ವಾಮಿಯವರ ಗೆಲುವಿಗೆ ಶ್ರಮ ವಹಿಸಿ ಕೆಲಸ ಮಾಡಬೇಕು. ಸ್ಥಳೀಯರನ್ನು ಅಭ್ಯರ್ಥಿ ಮಾಡಬೇಕು ಎಂದು ಕುಮಾರಸ್ವಾಮಿ ನಿರ್ಧರಿಸಿದ್ದರು. ಆದರೆ, ನಾಯಕರ ಒತ್ತಾಯದ ಮೇರೆಗೆ ಕುಮಾರಸ್ವಾಮಿ ಅಭ್ಯರ್ಥಿಯಾಗಿದ್ದಾರೆ. ಏ.4 ರಂದು ಬಿಜೆಪಿ-ಜೆಡಿಎಸ್ ಪಕ್ಷದ ಮೈತ್ರಿ ಅಭ್ಯರ್ಥಿಯಾಗಿ ಎಚ್.ಡಿ.ಕುಮಾರಸ್ವಾಮಿ ನಾಮಪತ್ರ ಸಲ್ಲಿಸಿ ನಂತರ ಬಹಿರಂಗ ಸಭೆ ಉದ್ದೇಶಿಸಿ ಎರಡು ಪಕ್ಷದ ನಾಯಕರು ಮಾತನಾಡಲಿದ್ದಾರೆ.