ಸಮಾಜದಲ್ಲಿನ ಅಸಮಾನತೆ, ದ್ವೇಷ ತೊಡೆದು ಹಾಕಲು ಸರ್ಕಾರ ಮಾಡುವ ಕಾನೂನುಗಳು ಸಮರ್ಪಕವಾಗಿ ಜಾರಿಗೊಳ್ಳಬೇಕು. ಈ ಹಿಂದೆ ಮೌಢ್ಯ ಪ್ರತಿಬಂಧಕ ಕಾಯ್ದೆ ರೂಪಿಸಿದೆವು. ಆದರೆ, ಮೌಢ್ಯದ ವಿರುದ್ಧ ಇರಬೇಕಾದವರೇ ಅದನ್ನು ಪಾಲಿಸುವುದು ಮುಂದುವರಿಸಿದ್ದರಿಂದ ಕಾಯ್ದೆ ಪರಿಣಾಮಕಾರಿಯಾಗಿ ಜಾರಿಯಾಗಲಿಲ್ಲ
ನನ್ನ ಸಹೋದರ ಡಿ.ಕೆ.ಶಿವಕುಮಾರ್ ಹಣೆಯಲ್ಲಿ ಬರೆದಿದ್ದರೆ ಮುಖ್ಯಮಂತ್ರಿಯಾಗುತ್ತಾರೆ, ಇಲ್ಲದಿದ್ದರೆ ಇಲ್ಲ. ಅದಕ್ಕಾಗಿ ತಲೆಕೆಡಿಸಿಕೊಳ್ಳುವ ಅವಶ್ಯಕತೆಯಿಲ್ಲ ಎಂದು ಬಮೂಲ್ ಅಧ್ಯಕ್ಷ, ಮಾಜಿ ಸಂಸದ ಡಿ.ಕೆ. ಸುರೇಶ್ ಹೇಳಿದ್ದಾರೆ.
‘ಆರ್‌ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಅವರಿಗೆ ಮಗ ತೇಜಸ್ವಿ ಯಾದವ್ ಅವರನ್ನು ಬಿಹಾರ ಮುಖ್ಯಮಂತ್ರಿ ಮಾಡುವ, ಸೋನಿಯಾ ಗಾಂಧಿ ಅವರಿಗೆ ತಮ್ಮ ಪುತ್ರ ರಾಹುಲ್ ಗಾಂಧಿಯವರನ್ನು ದೇಶದ ಪ್ರಧಾನಿಯನ್ನಾಗಿ ಮಾಡುವ ಆಸೆಯಿದೆ. ಆದರೆ ಸದ್ಯ ಆ ಎರಡೂ ಹುದ್ದೆ ಖಾಲಿಯಿಲ್ಲ
ಹೈಕಮಾಂಡ್ ಕೆಂಗಣ್ಣಿಗೆ ಗುರಿಯಾಗಿ ಸಂಪುಟದಿಂದ ಹೊರಬಿದ್ದಿರುವ ಮಾಜಿ ಸಚಿವ ಕೆ.ಎನ್.ರಾಜಣ್ಣ ಅವರ ನಿವಾಸಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬರುವ ನ.7 ರಂದು ಊಟಕ್ಕೆ ತೆರಳುತ್ತಿದ್ದು, ಈ ಬೆಳವಣಿಗೆ ಆಡಳಿತಾರೂಢ ಕಾಂಗ್ರೆಸ್ ವಲಯದಲ್ಲಿ ತೀವ್ರ ಕುತೂಹಲ ಕೆರಳಿಸಿದೆ.