ಆರ್‌ಸಿಜಿ ವಿಜಯೋತ್ಸವ ವೇಳೆ ಕಾಲ್ತುಳಿತದಿಂದ ಮೃತಪಟ್ಟ ಮಗನ ಮುಖ ತೋರಿಸುವಂತೆ ತಂದೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಎದುರೇ ವೈದ್ಯರನ್ನು ಅಂಗಾಲಾಚಿದ ಹೃದಯ ವಿದ್ರಾವಕ ಪ್ರಸಂಗ ನಡೆಯಿತು.
ಭೀಕರ ದುರಂತದ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತೀವ್ರ ಆಘಾತ ವ್ಯಕ್ತಪಡಿಸಿದ್ದು, ಮೃತರ ಕುಟುಂಬಗಳಿಗೆ ₹10 ಲಕ್ಷ ಪರಿಹಾರ ಘೋಷಿಸಿದ್ದಾರೆ.