ಕೋಟಿ ಕೋಟಿ ಅನುದಾನ ಇದ್ದರೂ ಖರ್ಚು ಮಾಡದ ಅಧಿಕಾರಿಗಳಿಗೆ ಚಳಿ ಬಿಡಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಸಂಬಂಧಿಸಿದ ಎಲ್ಲ ಅಧಿಕಾರಿಗಳಿಗೂ ಕೂಡಲೇ ನೋಟಿಸ್ ನೀಡಿ, ಉತ್ತರ ಸಮರ್ಪಕವಾಗಿಲ್ಲದಿದ್ದರೆ ತಕ್ಷಣ ಅಮಾನತು ಮಾಡಿ ಎಂದು ಮುಖ್ಯ ಕಾರ್ಯದರ್ಶಿಗೆ ಖಡಕ್ ಸೂಚನೆ ನೀಡಿದ್ದಾರೆ.
ಡಿಸಿಎಂ ಡಿ.ಕೆ.ಶಿವಕುಮಾರ್ ಬಿಟ್ಟು ಔತಣ ಕೂಟದ ಹೆಸರಲ್ಲಿ ರಹಸ್ಯ ಸಭೆ ಮಾಡಿಲ್ಲ ಎಂದು ಪ್ರತಿಕ್ರಿಯಿಸಿರುವ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರು, 2028ಕ್ಕೆ ನಾನೇ ಸಿಎಂ ಅಭ್ಯರ್ಥಿಯಾಗಿದ್ದು ಏನಾಗುತ್ತದೆಯೋ ಕಾದು ನೋಡಬೇಕು ಎಂದು ಹೇಳಿದ್ದಾರೆ.
ಮುಖ್ಯಮಂತ್ರಿಯಾಗಿ 2ನೇ ಅವಧಿಯಲ್ಲೂ ಸಿದ್ದರಾಮಯ್ಯ ಉತ್ತಮವಾಗಿ ಕೆಲಸ ಮಾಡಿಕೊಂಡು ಬರುತ್ತಿದ್ದಾರೆ. ಇನ್ನೂ ಮೂರೂವರೆ ವರ್ಷ ಅವರೇ ಸಿಎಂ ಆಗಿ ಮುಂದುವರಿಯಲಿ ಎಂದು ಸಚಿವ ಬೈರತಿ ಸುರೇಶ್ ಹೇಳಿದರು.
ಪ್ರತಿಯೊಂದು ಮನೆಯಲ್ಲೂ ಒಂದು ಕಲಾಕೃತಿ ಇದ್ದರೆ ಅದು ಮನೆಯ ಅಂದ ಚೆಂದ ಹೆಚ್ಚಿಸುತ್ತದೆ. ಜೊತೆಗೆ ಕಲಾವಿದರನ್ನು ಬೆಂಬಲಿಸುವ ದೃಷ್ಟಿಯಿಂದಲೂ ಕಲಾಸಕ್ತರು ಹೆಚ್ಚಿನ ಕಲಾಕೃತಿಯನ್ನು ಕೊಳ್ಳುವ ಗುಣ ಬೆಳೆಸಿಕೊಳ್ಳಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಮುಂದಿನ 6 ತಿಂಗಳೊಳಗೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿ ಆಗಲಿದ್ದಾರೆ ಎಂದು ಬಿಜೆಪಿ ಸಂಸದ ಡಾ.ಕೆ.ಸುಧಾಕರ್ ಸ್ಫೋಟಕ ಹೇಳಿಕೆ ನೀಡಿದ್ದಾರೆ.