ಅರಸೀಕೆರೆಯಲ್ಲಿ ಇಂದು ಅಭಿವೃದ್ಧಿ ಕಾಮಗಾರಿಗಳಿಗೆ ಸಿಎಂ ಶಂಕುಸ್ಥಾಪನೆ
Jul 26 2025, 12:30 AM ISTಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಇವರ ಸಹಯೋಗದಲ್ಲಿ ಜು.೨೬ರಂದು ಮಧ್ಯಾಹ್ನ ೧೨ ಗಂಟೆಗೆ ಅರಸೀಕೆರೆ ತಾಲೂಕು ಕ್ರೀಡಾಂಗಣದಲ್ಲಿ ಅರಸೀಕೆರೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ವಿವಿಧ ಇಲಾಖೆಗಳ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ, ಲೋಕಾರ್ಪಣೆ ಹಾಗೂ ಫಲಾನುಭವಿಗಳ ಸಮಾವೇಶ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಶಂಕುಸ್ಥಾಪನೆ ಹಾಗೂ ಕಾರ್ಯಕ್ರಮ ಉದ್ಟಾಟಿಸಲಿದ್ದಾರೆ. ಮಾಜಿ ಪ್ರಧಾನಮಂತ್ರಿ ಎಚ್.ಡಿ. ದೇವೇಗೌಡರು ಗೌರವಾನ್ವಿತ ಉಪಸ್ಥಿತಿ ವಹಿಸಲಿದ್ದಾರೆ. ಉಪ ಮುಖ್ಯಮಂತ್ರಿಗಳಾದ ಡಿ.ಕೆ ಶಿವಕುಮಾರ್ ಅವರು ಭಾಗವಹಿಸಲಿದ್ದಾರೆ.