ಇಂದು ಸಿಎಂ, ಡಿಸಿಎಂ ಬಳಿಗೆ ನಿಯೋಗ
Jun 25 2025, 01:18 AM ISTಭದ್ರಾ ಜಲಾಶಯದ ಹಿನ್ನೀರಿನಿಂದ ಬಹುಗ್ರಾಮ ಕುಡಿಯುವ ನೀರಿನ ಯೋಜನೆಗಳಿಗೆ ಕುಡಿಯುವ ನೀರು ಒಯ್ಯಬೇಕೆಂದು ಹಿಂದಿನ ಬಿಜೆಪಿ ಸರ್ಕಾರ ಆದೇಶಿಸಿತ್ತು. ಈ ಆದೇಶವನ್ನೇ ಧಿಕ್ಕರಿಸಿ, ಈಗಿನ ಕಾಂಗ್ರೆಸ್ ಸರ್ಕಾರ ಮನಬಂದಂತೆ ಡ್ಯಾಂನ ನಿಷೇಧಿತ ಪ್ರದೇಶದಲ್ಲಿ ಬಲದಂಡೆ ನಾಲೆ ಸೀಳುವ ಕಾಮಗಾರಿ ಕೈಗೊಂಡಿದೆ. ಈ ಕಾಮಗಾರಿ ತಕ್ಷಣವೇ ನಿಲ್ಲಿಸಬೇಕು. ಬೇಡಿಕೆಗೆ ಮಣಿಯದಿದ್ದರೆ ಕಾನೂನು ಹೋರಾಟಕ್ಕಾಗಿ ಕೋರ್ಟ್ ಮೆಟ್ಟಿಲೇರುತ್ತೇವೆ ಎಂದು ಹರಿಹರ ಕ್ಷೇತ್ರ ಬಿಜೆಪಿ ಶಾಸಕ ಬಿ.ಪಿ.ಹರೀಶ ಎಚ್ಚರಿಸಿದ್ದಾರೆ.