ಮೈಸೂರಿನ ಪಾರಂಪರಿಕ ಕಟ್ಟಡಗಳನ್ನು ಸಂರಕ್ಷಿಸಲು ಸಿಎಂ ಮುಂದಾಗಲಿ
Jul 22 2025, 12:00 AM ISTಮೈಸೂರು ನಗರದಲ್ಲಿನ ಪಾರಂಪರಿಕ ಕಟ್ಟಡಗಳು ಕುಸಿಯುವ ಹಂತ ತಲುಪಿವೆ. ಮೈಸೂರಿನಲ್ಲಿ ಒಟ್ಟು 234 ಪಾರಂಪರಿಕ ಕಟ್ಟಡಗಳಿದ್ದು, ಈ ಪೈಕಿ 129 ಅಧಿಕೃತ ಪಾರಂಪರಿಕ ಕಟ್ಟಡ ಎಂದು ಗುರುತಿಸಲಾಗಿದೆ. ಮಹಾರಾಜ ಕಾಲೇಜು, ಯುವರಾಜ ಕಾಲೇಜು, ಸಂಸ್ಕೃತ ಪಾಠಶಾಲೆ, ಪ್ರಾಚ್ಯವಸ್ತು ಸಂಗ್ರಹಾಲಯಗಳ ಕೇಂದ್ರ ಸೇರಿದಂತೆ ಅನೇಕ ಕಟ್ಟಡಗಳು ದುಸ್ಥಿತಿಗೆ ತಲುಪಿವೆ.