‘ಭಾರಿ ಮಳೆಯಿಂದ ನಗರದಲ್ಲಿ ತಗ್ಗು ಪ್ರದೇಶಗಳಿಗೆ ನೀರು ನುಗುತ್ತಿದೆ. ಈ ಸಮಸ್ಯೆಗೆ ಪರಿಹಾರ ಕಲ್ಪಿಸಲು ₹2,000 ಕೋಟಿ ವೆಚ್ಚದಲ್ಲಿ 253 ಕಿ.ಮೀ. ರಾಜಕಾಲುವೆ ತಡೆಗೋಡೆ ಪುನರ್ ನಿರ್ಮಾಣ ಮಾಡಲು ಯೋಜನಾ ವರದಿಗೆ ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಅಂಗೀಕಾರ ನೀಡಲಾಗುವುದು ಸಿದ್ದರಾಮಯ್ಯ ಹೇಳಿದ್ದಾರೆ.
ದಿಲ್ಲಿ ಮಾಜಿ ಸಿಎಂ ಅರವಿಂದ ಕೇಜ್ರಿವಾಲ್ ಮೇಲೆ ಶುಕ್ರವಾರ ನಡೆದ ಹಲ್ಲೆ ಘಟನೆ ಬಗ್ಗೆ ಕಿಡಿಕಾರಿರುವ ಆಪ್ ಸಂಸದ ಸಂಜಯ ಸಿಂಗ್ ‘ಕೇಜ್ರಿವಾಲ್ ಅವರನ್ನು ಕೊಲ್ಲಲು ಬಿಜೆಪಿ ಸಂಚು ರೂಪಿಸುತ್ತಿದ್ದು, ಪೊಲೀಸರೂ ಅವರೊಂದಿಗೆ ಸೇರಿದ್ದಾರೆ ಎಂದಿದ್ದಾರೆ.
‘ವೈದ್ಯರು ಹೇಳಿದ ಹಾಗೆ ಜೀವನ ಶೈಲಿಯನ್ನು ಅಳವಡಿಸಿಕೊಂಡರೆ ಪ್ರತಿ ಕಾಯಿಲೆಯನ್ನೂ ನಿಯಂತ್ರಣಕ್ಕೆ ತರಬಹುದು. ನಾನು ಕಳೆದ 30 ವರ್ಷಗಳಿಂದ ಮಧುಮೇಹದಿಂದ ಬಳಲುತ್ತಿದ್ದು, ಈವರೆಗೂ ವೈದ್ಯರು ಹೇಳಿದಂತೆ ಮ್ಯಾನೇಜ್ ಮಾಡುತ್ತಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.