ಸರ್ಕಾರಿ ಜಾಗದಲ್ಲಿ ಸಂಘ-ಸಂಸ್ಥೆಗಳ ಚಟುವಟಿಕೆಗಳಿಗೆ ನಿರ್ಬಂಧ ಹೇರುವ ಬಗ್ಗೆ 2013ರಲ್ಲಿ ಅಂದಿನ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಅವರೇ ಆದೇಶ ಹೊರಡಿಸಿದ್ದರು. ಈ ಆದೇಶ ಆರ್‌ಎಸ್‌ಎಸ್‌ಗೂ ಅನ್ವಯವಾಗುತ್ತದೆ. ಅದನ್ನೇ ನಾವು ಈಗ ಜಾರಿಗೊಳಿಸಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.
ಗುತ್ತಿಗೆದಾರರ ಸಂಘದ ಅಧ್ಯಕ್ಷರು ದುರುದ್ದೇಶಪೂರ್ವಕವಾಗಿ ಸರ್ಕಾರದ ವಿರುದ್ಧ ಕಮಿಷನ್ ಆರೋಪ ಮಾಡುತ್ತಿದ್ದಾರೆ. ಯಾರೋ ಇದನ್ನು ಅವರ ಬಳಿ ಹೇಳಿಸುತ್ತಿದ್ದಾರೆ. ಅವರ ಆರೋಪ ಸತ್ಯವಾಗಿದ್ದರೆ, ಅವರಿಗೆ ಕೋರ್ಟ್‌ಗೆ ಹೋಗುವುದಕ್ಕೆ ಹೇಳಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.
ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗವು ಕೈಗೊಂಡಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಗೆ ಆಗಮಿಸಿದ್ದ ಗಣತಿದಾರರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 45 ನಿಮಿಷಗಳ ಕಾಲ ಸಮಾಧಾನದಿಂದ ಉತ್ತರಿಸಿದ್ದಾರೆ.
ಬೆಂಗಳೂರು ಒಂದರಲ್ಲೇ ಪ್ರತೀ ವರ್ಷ 943 ಟನ್ ಆಹಾರ ವ್ಯರ್ಥ ಆಗುತ್ತಿದೆ. ಸುಮಾರು 360 ಕೋಟಿ ಮೌಲ್ಯದ ಆಹಾರ ವ್ಯರ್ಥ ಮಾಡಲಾಗುತ್ತಿದೆ. ಗೊತ್ತಿದ್ದು ಆಹಾರ ವ್ಯರ್ಥ ಮಾಡುವುದು ಅನ್ನಕ್ಕೆ ತೋರುವ ಅಹಂಕಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
‘ಆರ್‌ಎಸ್‌ಎಸ್ ಬಗ್ಗೆ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದರಲ್ಲಿ ತಪ್ಪೇನಿದೆ? ಸರ್ಕಾರಿ ಜಾಗದಲ್ಲಿ ಅದರ ಚಟುವಟಿಕೆಗೆ ನಿರ್ಬಂಧ ಹಾಕುವಂತೆ ಅವರು ಪತ್ರ ಬರೆದಿದ್ದಾರೆ. ತಮಿಳುನಾಡಿನಲ್ಲಿ ಯಾವ ರೀತಿ ನಿಷೇಧ ಹೇರಲಾಗಿದೆ ಎಂಬ ಬಗ್ಗೆ ಮಾಹಿತಿ ತರಿಸುವಂತೆ ಸರ್ಕಾರದ ಕಾರ್ಯದರ್ಶಿಗೆ ಸೂಚಿಸಲಾಗಿದೆ.
ಆರ್‌ಎಸ್‌ಎಸ್ ಚಟುವಟಿಕೆಗಳಿಗೆ ನಿರ್ಬಂಧ ಹಾಕುವಂತೆ ಪತ್ರ ಬರೆದ ಬಳಿಕ ಬೆದರಿಕೆ ಕರೆಗಳು ಬರುತ್ತಿರುವುದಾಗಿ ಸಚಿವ ಪ್ರಿಯಾಂಕ್ ಖರ್ಗೆ ಅವರು ಖುದ್ದು ತಿಳಿಸಿದ್ದಾರೆ. ಅವರಿಗೆ ರಕ್ಷಣೆ ಒದಗಿಸಲು ಕ್ರಮಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಹಾಸನಾಂಬೆ ದರ್ಶನ, ಹಾಸನ, ಸಿಎಂ ಸಿದ್ಧರಾಮಯ್ಯ ಶ್ರೀ ಹಾಸನಾಂಬೆ ದೇವಿಯ ದರ್ಶನ ಪಡೆದ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಶ್ರೀ ಹಾಸನಾಂಬೆ ಮತ್ತು ಶ್ರೀ ಸಿದ್ದೇಶ್ವರ ಸ್ವಾಮಿ ದರ್ಶನ ಪಡೆದು ಉತ್ತಮ ಮಳೆ ಬೆಳೆಯಾಗಲಿ ಎಂದು ದೇವರಲ್ಲಿ ಪ್ರಾರ್ಥನೆ ಮಾಡಿದ್ದೇನೆ ಎಂದು ತಿಳಿಸಿದರು.
ಉಪ ಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್ ಅವರು ಕುಟುಂಬ ಸಮೇತರಾಗಿ ಬಂದು ಮಂಗಳವಾರ ಹಾಸನಾಂಬ ದೇವಿ ದರ್ಶನ ಪಡೆದರು. ನಂತರ ಮಾತನಾಡಿ, ಈ ಬಾರಿ ಕಂದಾಯ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಕೃಷ್ಣಬೈರೇಗೌಡರ ನೇತೃತ್ವದಲ್ಲಿ ಉತ್ತಮ ವ್ಯವಸ್ಥೆ ಮಾಡಿದ್ದಾರೆ.