‘ಕಾಂಗ್ರೆಸ್ ಪಕ್ಷದಲ್ಲಿ ಮುಖ್ಯಮಂತ್ರಿ ಸ್ಥಾನದ ವಿಚಾರ ಸಂಖ್ಯಾಬಲದಿಂದ ನಿರ್ಧಾರವಾಗುವುದಿಲ್ಲ, ಎಲ್ಲವನ್ನೂ ಹೈಕಮಾಂಡ್ ನಿರ್ಧರಿಸುತ್ತದೆ’ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಸರ್ಕಾರದ ಬಗ್ಗೆ ಟೀಕಿಸುವ ಪ್ರತಿಪಕ್ಷಗಳಿಗೆ 3-4 ಮಂದಿ ಸಚಿವರು ಬಿಟ್ಟರೆ ಬೇರೆ ಯಾರೂ ಪ್ರತ್ಯುತ್ತರ ನೀಡುತ್ತಿಲ್ಲ. ಆರ್‌ಎಸ್‌ಎಸ್ ಕುರಿತ ನಿಲುವು ಸೇರಿ ಸರ್ಕಾರದ ಎಲ್ಲಾ ನಿಲುವು ಹಾಗೂ ಸಾಧನೆಗಳನ್ನು ಬಲವಾಗಿ ಸಮರ್ಥಿಸಿಕೊಂಡು ಪ್ರತಿಪಕ್ಷಗಳಿಗೆ ತಿರುಗೇಟು ನೀಡಬೇಕು - ಮುಖ್ಯಮಂತ್ರಿ ಸಿದ್ದರಾಮಯ್ಯ
ರಾಜ್ಯದಲ್ಲಿ ಸಿಎಂ ಬದಲಾವಣೆಗೆ ಹೈಕಮಾಂಡ್ ನಿರ್ಧಾರವೇ ಅಂತಿಮ ಎಂಬ ಡಿಕೆಶಿ ಅವರ ಹೇಳಿಕೆಗೆ ಪ್ರತಿಕ್ರಿಯೆ ನೀಡಿರುವ ಅವರು, ಶಾಸಕರ ಬೆಂಬಲ ಇಲ್ಲದೇ ಯಾರೂ ಮುಖ್ಯಮಂತ್ರಿ ಆಗೋಕೆ ಆಗಲ್ಲ. ಬಹುಮತ ಇದ್ರೆ ಆಗೋದು, ಹೈಕಮಾಂಡ್ ಆಶೀರ್ವಾದವೂ ಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಸಿಎಂ ಬದಲಾವಣೆ ಆಗುವುದಿಲ್ಲ. ಸಿದ್ದರಾಮಯ್ಯ ಅವರೇ ಸಿಎಂ ಆಗಿ ಐದು ವರ್ಷ ಅಧಿಕಾರ ಪೂರೈಸುತ್ತಾರೆ. ಬೇಕಿದ್ದರೆ, ಸ್ಟಾಂಪ್ ಪೇಪರ್ ಮೇಲೆ ಬರೆದು ಕೊಡುತ್ತೀನಿ ಎಂದು ಸಚಿವ ದರ್ಶನಾಪುರ ತಿಳಿಸಿದ್ದಾರೆ.
ರಾಜ್ಯ ಸರ್ಕಾರದಲ್ಲಿ ಅಧಿಕಾರ ಹಂಚಿಕೆ ಬಗ್ಗೆ ಯಾವುದೇ ಚರ್ಚೆ ನಡೆದಿಲ್ಲ, ಇದೆಲ್ಲಾ ಊಹಾಪೋಹ. ಸಿದ್ದರಾಮಯ್ಯ ಅವರೇ 5 ವರ್ಷವೂ ಸಿಎಂ ಆಗಿ ಮುಂದುವರಿಯುತ್ತಾರೆ ಎಂದು ವಿಧಾನ ಪರಿಷತ್ ಸದಸ್ಯ ಯತೀಂದ್ರ ಸಿದ್ದರಾಮಯ್ಯ ಪುನರುಚ್ಚರಿಸಿದ್ದಾರೆ.