ಮುಡಾ ಹಗರಣಕ್ಕೆ ಸಂಬಂಧಿಸಿ ಮಹತ್ವದ ಬೆಳವಣಿಗೆಯಲ್ಲಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ನಿಗೆ ನಿವೇಶನ ಹಂಚಿಕೆ ಮಾಡಿದ ಆರೋಪ ಹೊತ್ತಿರುವ ಮುಡಾ ಮಾಜಿ ಆಯುಕ್ತ ನಟೇಶ್ ಅವರನ್ನು ವಿಚಾರಣೆಗೆ ಸಹಕರಿಸದ ಆರೋಪದ ಮೇರೆಗೆ ಜಾರಿ ನಿರ್ದೇಶನಾಲಯ (ಇ.ಡಿ.) ತನ್ನ ವಶಕ್ಕೆ ಪಡೆದಿದೆ.
ಮುಡಾ ನಿವೇಶನ ಹಂಚಿಕೆ ಅಕ್ರಮ ಸಂಬಂಧ ಜಾರಿ ನಿರ್ದೇಶನಾಲಯ (ಇ.ಡಿ.)ದ ಅಧಿಕಾರಿಗಳು ಬೆಂಗಳೂರು ಮತ್ತು ಮೈಸೂರಿನಲ್ಲಿ 10ಕ್ಕೂ ಹೆಚ್ಚಿನ ಕಡೆ ಏಕಕಾಲಕ್ಕೆ ಶೋಧ ಕಾರ್ಯ ನಡೆಸಿ ಹಲವು ಮಹತ್ವದ ಮಾಹಿತಿಗಳನ್ನು ಸಂಗ್ರಹಿಸಿದ್ದಾರೆ.
‘ಭಾರಿ ಮಳೆಯಿಂದ ನಗರದಲ್ಲಿ ತಗ್ಗು ಪ್ರದೇಶಗಳಿಗೆ ನೀರು ನುಗುತ್ತಿದೆ. ಈ ಸಮಸ್ಯೆಗೆ ಪರಿಹಾರ ಕಲ್ಪಿಸಲು ₹2,000 ಕೋಟಿ ವೆಚ್ಚದಲ್ಲಿ 253 ಕಿ.ಮೀ. ರಾಜಕಾಲುವೆ ತಡೆಗೋಡೆ ಪುನರ್ ನಿರ್ಮಾಣ ಮಾಡಲು ಯೋಜನಾ ವರದಿಗೆ ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಅಂಗೀಕಾರ ನೀಡಲಾಗುವುದು ಸಿದ್ದರಾಮಯ್ಯ ಹೇಳಿದ್ದಾರೆ.