ಎತ್ತಿನಹೊಳೆ ಯೋಜನೆ ಒಂದು ಹಂತಕ್ಕೆ ಬಂದಿದ್ದು ಸೆ.6ರಂದು ಮುಖ್ಯಮಂತ್ರಿಗಳು ಚಾಲನೆ ನೀಡುವರು. ಯೋಜನೆಯಿಂದ ಬಯಲು ಸೀಮೆ ಜಿಲ್ಲೆಗಳಿಗೆ ಕುಡಿಯುವ ನೀರಿಗೆ ಅನುಕೂಲವಾಗಲಿದೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ. ಹೆಚ್. ಮುನಿಯಪ್ಪ ತಿಳಿಸಿದರು.
ಮೈಕ್ರೋ ಫೈನಾನ್ಸ್ ಕಂಪನಿಗಳನ್ನು ನಿಯಂತ್ರಿಸಲು ಕರ್ನಾಟಕ ಮೈಕ್ರೊ ಫೈನಾನ್ಸ್ ಸಂಸ್ಥೆಗಳ ನಿಯಂತ್ರಣ ವಿಧೇಯಕವನ್ನು ಸುಗ್ರೀವಾಜ್ಞೆ ಮೂಲಕ ತರುವ ಕುರಿತು ಶನಿವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಸಭೆ ನಡೆಸುವುದಾಗಿ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ. ಪಾಟೀಲ್ ತಿಳಿಸಿದ್ದಾರೆ.
ಮುಡಾ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಲೋಕಾಯುಕ್ತ ಕ್ಲೀನ್ ಚೀಟ್ ಸಿಗುವ ನಿರೀಕ್ಷೆ ಇತ್ತು, ಇಡಿ, ಸಿಬಿಐ, ಐಟಿ ಏನೇ ಬರಲಿ ಎದುರಿಸಲು ಸಿದ್ಧ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.
ಮೈಕ್ರೋ ಫೈನಾನ್ಸ್ ಸಂಸ್ಥೆಗಳಿಂದ ಜನರ ಮೇಲಾಗುತ್ತಿರುವ ಕಿರುಕುಳ ತಪ್ಪಿಸಲು ರಾಜ್ಯ ಸರ್ಕಾರ ಮುಂದಾಗಿದ್ದು, ಅದಕ್ಕೆ ಸಂಬಂಧಿಸಿದಂತೆ ಶನಿವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಮಹತ್ವದ ಸಭೆ ನಡೆಸಲಾಗುತ್ತಿದೆ.