ನಕ್ಸಲ್ ಚಟುವಟಿಕೆಯಲ್ಲಿ ತೊಡಗಿರುವವರು ಮುಖ್ಯವಾಹಿನಿಗೆ ಬರಲು ಮಾತುಕತೆ ನಡೆಸಲು ಸಿದ್ಧರಿದ್ದರೆ ಅದನ್ನು ಸರ್ಕಾರ ಸ್ವಾಗತಿಸಿ, ಸಹಾನುಭೂತಿಯಿಂದ ನಡೆದುಕೊಳ್ಳಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಯ ನೀಡಿದ್ದಾರೆ.
ಆಡಳಿತಾರೂಢ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ತೀವ್ರ ಆರೋಪ-ಪ್ರತ್ಯಾರೋಪಕ್ಕೆ ಕಾರಣವಾಗಿರುವ ಗುತ್ತಿಗೆದಾರ ಸಚಿನ್ ಪಂಚಾಳ್ ಆತ್ಮಹತ್ಯೆ ಪ್ರಕರಣದ ತನಿಖೆಯನ್ನು ರಾಜ್ಯ ಸರ್ಕಾರ ಸಿಐಡಿಗೆ ವಹಿಸಿದೆ.
ಮಾಜಿ ಪ್ರಧಾನಿ ಮನಮೋಹನ ಸಿಂಗ್ ಅವರು ಅಸ್ಸಾಂನಿಂದ ರಾಜ್ಯಸಭಾ ಸದಸ್ಯರಾಗಿದ್ದ ಸಮಯದಲ್ಲಿ ಅಲ್ಲಿನ ಅಂದಿನ ಮುಖ್ಯಮಂತ್ರಿಗಳ ನಿವಾಸದಲ್ಲೇ ಬಾಡಿಗೆಗೆ ಇದ್ದರು ಎಂಬ ಅಚ್ಚರಿಯ ಮಾಹಿತಿ ಬಹಿರಂಗವಾಗಿದೆ.
ಮಹಾತ್ಮ ಗಾಂಧೀಜಿ ಅವರ ಅಧ್ಯಕ್ಷತೆಯಲ್ಲಿ ಬೆಳಗಾವಿಯಲ್ಲಿ 1924ರಲ್ಲಿ ನಡೆದ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ ಆಚರಣೆ ಹಿನ್ನೆಲೆಯಲ್ಲಿ ನಗರದಲ್ಲಿ ವಿಶೇಷವಾಗಿ ರೂಪಿಸಿರುವ ಸರಸ್ ಮೇಳ ಮತ್ತು ಖಾದಿ ಉತ್ಸವ, ವಸ್ತುಪ್ರದರ್ಶನ ಮತ್ತು ಮಾರಾಟ ಮೇಳಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಿದರು.