ಸಂಸದ ಪ್ರಜ್ವಲ್ ರೇವಣ್ಣ ಕೇವಲ ಲೈಂಗಿಕ ದೌರ್ಜನ್ಯ ಎಸಗಿಲ್ಲ. ರೇಪ್ ಮಾಡಿದ್ದಾನೆ. ಆತನ ವಿರುದ್ಧ ರೇಪ್ ಕೇಸ್ ದಾಖಲಾಗಿದೆ. ಆದರೆ, ಕೇಂದ್ರ ಸರ್ಕಾರ ಆತನನ್ನು ರಕ್ಷಿಸುವ ಕೆಲಸ ಮಾಡುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಗಂಭೀರ ಆರೋಪ ಮಾಡಿದ್ದಾರೆ.
ಪ್ರಜ್ವಲ್ ರೇವಣ್ಣ ಅವರ ಪಾಸ್‌ಪೋರ್ಟ್ ರದ್ದುಪಡಿಸಿ ಸ್ವದೇಶಕ್ಕೆ ವಾಪಸ್ ಕರೆತರಲು ನೆರವಾಗುವಂತೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ರ ಬರೆದಿದ್ದಾರೆ.