ಮುಂದಿನ ಬಾರಿಯೂ ನೀವೇ ಮುಖ್ಯಮಂತ್ರಿ ಎಂದು ಕೂಗಿದ ಅಭಿಮಾನಿಗೆ, ಇದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯಿಸಿ, ನೋಡೋಣ, ನಿಮ್ಮ ಆಸೆ, ನಾನು ರಾಜಕೀಯ ಕೊನೆಗಾಲದಲ್ಲಿದ್ದೇನೆ ಎಂದು ಅಚ್ಚರಿಯ ಹೇಳಿಕೆ ನೀಡಿದರು.
ಬುದ್ಧ, ಬಸವಣ್ಣನವರ ನಂತರ ಸಮಾನತೆಗಾಗಿ, ಸಾಮಾಜಿಕ ಪರಿವರ್ತನೆಗಾಗಿ ಹೋರಾಡಿದವರು ಅಂಬೇಡ್ಕರ್. ದೇಶಕ್ಕೆ ಹಾಗೂ ನಮ್ಮ ಸಾಮಾಜಿಕ ಬದುಕಿಗೆ ಅಗತ್ಯವಾದಂತಹ ಸಂವಿಧಾನವನ್ನು ಕೊಟ್ಟಿದ್ದು ಅದು, ಜಗತ್ತಿನಲ್ಲಿಯೇ ಶ್ರೇಷ್ಠ ಸಂವಿಧಾನವೆಂದು ಖ್ಯಾತಿ ಪಡೆದಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ದೇವೇಗೌಡರ ಕುಟುಂಬದ ವಿರುದ್ಧ ಅಬ್ಬರಿಸಿದ್ದ ಸಿಎಂ ಸಿದ್ದರಾಮಯ್ಯ ಟೀಕೆಗೆ ಮಾಜಿ ಸಚಿವ ಎಚ್.ಡಿ.ರೇವಣ್ಣ ತಿರುಗೇಟು. ದೇವೇಗೌಡರ ಯಾವ್ಯಾವ ಸಾಕ್ಷಿ ಗುಡ್ಡೆ ಇದೆ ಎಂಬುದನ್ನು ಕಾಲ ಬಂದಾಗ ಹೇಳ್ತೀನಿ. ಅವರು ಬಂದರೆ ಕರೆದುಕೊಂಡು ಹೋಗಿ ಎಲ್ಲೆಲ್ಲಿ ಸಾಕ್ಷಿ ಗುಡ್ಡೆ ಇದೆ ಅಂತ ತೋರುಸ್ತೀನಿ ಎಂದಿದ್ದಾರೆ.
ಸಿದ್ದರಾಮಯ್ಯನನ್ನು ಉಪ ಮುಖ್ಯಮಂತ್ರಿ ಮಾಡಿ ನಾನು ರಾಜಕೀಯವಾಗಿ ಬೆಳೆಸಿದೆ ಎಂದು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಹೇಳುತ್ತಾ ಬಂದಿದ್ದಾರೆ. ಆದರೆ, ನಾನು ಹಾಗೂ ಜಾಲಪ್ಪ ಬೆನ್ನಿಗೆ ನಿಲ್ಲದಿದ್ದರೆ ರಾಮಕೃಷ್ಣ ಹೆಗಡೆ ಅವರ ಪೈಪೋಟಿ ಎದುರಿಸಿ ದೇವೇಗೌಡ ಅವರು ಮುಖ್ಯಮಂತ್ರಿಯಾಗುತ್ತಲೇ ಇರಲಿಲ್ಲ.
ಉಪ ಚುನಾವಣೆ ಭರ್ಜರಿ ಗೆಲುವಿನ ನೆಪದಲ್ಲಿ ಗುರುವಾರ ಹಾಸನದಲ್ಲಿ ನಡೆದ ಜನ ಕಲ್ಯಾಣೋತ್ಸವ ವಿಧಾನಸಭಾ ಚುನಾವಣೆಗೂ ಮುನ್ನ ನಡೆದಿದ್ದ ದಾವಣಗೆರೆ ಸಿದ್ದರಾಮೋತ್ಸವದ ಶಕ್ತಿ ಪ್ರದರ್ಶನದ ನೆನಪು ಮಾರ್ದನಿಸುವಂತೆ ಮಾಡಿತು