ರಾಜ್ಯದಲ್ಲಿ ಸಿಎಂ ಬದಲಾವಣೆಗೆ ಹೈಕಮಾಂಡ್ ನಿರ್ಧಾರವೇ ಅಂತಿಮ ಎಂಬ ಡಿಕೆಶಿ ಅವರ ಹೇಳಿಕೆಗೆ ಪ್ರತಿಕ್ರಿಯೆ ನೀಡಿರುವ ಅವರು, ಶಾಸಕರ ಬೆಂಬಲ ಇಲ್ಲದೇ ಯಾರೂ ಮುಖ್ಯಮಂತ್ರಿ ಆಗೋಕೆ ಆಗಲ್ಲ. ಬಹುಮತ ಇದ್ರೆ ಆಗೋದು, ಹೈಕಮಾಂಡ್ ಆಶೀರ್ವಾದವೂ ಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಬುದ್ದ, ಬಸವ ಹಾಗೂ ಡಾ.ಅಂಬೇಡ್ಕರ್ ಅವರ ನಿಜವಾದ ಅಭಿಮಾನಿಗಳಾಗಿದ್ದು, ಮನುಕುಲದ ಉದ್ಧಾರ ಹಾಗೂ ಸರ್ವ ಜನಾಂಗದ ಹಿತ ಬಯಸಿರುವ ಅವರೆಲ್ಲರ ತತ್ವ ಸಿದ್ಧಾಂತಗಳನ್ನು ಜೀವನದಲ್ಲಿ ಅಳವಡಸಿಕೊಳ್ಳುವ ಮೂಲಕ ಪ್ರಾಮಾಣಿಕ ಪ್ರಯತ್ನ
ಸ್ವಾತಂತ್ರ‍್ಯ ಬಂದಾಗಿನಿಂದ ರಾಜ್ಯದ ಮುಖ್ಯಮಂತ್ರಿಗಳಲ್ಲಿ ಹೆಚ್ಚು ಸಾಲ ಮಾಡಿದ ಕೀರ್ತಿ ಸಿದ್ದರಾಮಯ್ಯನವರಿಗೆ ಸಲ್ಲುತ್ತದೆ ಎಂದು ವಿಪಕ್ಷ ನಾಯಕ ಆರ್.ಅಶೋಕ ಹೇಳಿದರು. ಐಗಳಿ ಗ್ರಾಮದಲ್ಲಿ ಬೆಳೆ ಹಾನಿ ವೀಕ್ಷಿಸಿದ ಬಳಿಕ ಶುಕ್ರವಾರ ರಾತ್ರಿ ನಡೆದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.
‘ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ತಾವು ಸಿಎಂ ಆಗಬೇಕು ಎಂಬ ಆಸೆ ಇದೆ. ಅವರು ಕೂಡ ಮುಖ್ಯಮಂತ್ರಿ ಆಗಬೇಕು ಎಂದು ಬಯಸುವವನು ನಾನು. ಆದರೆ, ಈ ಐದು ವರ್ಷ ಮಾತ್ರ ಸಿದ್ದರಾಮಯ್ಯ ಅವರೇ ಸಿಎಂ ಆಗಿರುತ್ತಾರೆ’ ಎಂದು ವಸತಿ ಸಚಿವ ಜಮೀರ್ ಅಹಮದ್ ಹೇಳಿದ್ದಾರೆ.