ರಾಜ್ಯಪಾಲರ ನಡೆಯಿಂದ ಸಿದ್ದರಾಮಯ್ಯ ಸರ್ಕಾರಕ್ಕೆ ಅವಮಾನ
Aug 24 2024, 01:18 AM ISTಸಿದ್ದರಾಮಯ್ಯ ಅವರು 40 ವರ್ಷಗಳ ಸುದೀರ್ಘ ರಾಜಕೀಯ ಇತಿಹಾಸದಲ್ಲಿ ಕಪ್ಪುಚುಕ್ಕೆ ಇಲ್ಲದಂತೆ, ಕಳಂಕ ರಹಿತ ರಾಜಕಾರಣ ಮಾಡುತ್ತಿದ್ದಾರೆ. ರಾಜ್ಯದ ಮುಖ್ಯಮಂತ್ರಿ ಆಗಿರುವ ಅವರ ವಿರುದ್ಧ ಖಾಸಗಿ ವ್ಯಕ್ತಿಯೊಬ್ಬರು ನೀಡಿದ ದೂರು ಅರ್ಜಿಯನ್ನು ಕೂಲಂಕುಷವಾಗಿ ಪರಿಶೀಲನೆ ನಡೆಸದೇ ಕೇಂದ್ರ ಸರ್ಕಾರ, ಬಿಜೆಪಿ, ಜೆಡಿಎಸ್ ಪಕ್ಷಗಳ ಒತ್ತಡಕ್ಕೆ ಮಣಿದು ರಾಜ್ಯಪಾಲರು ಏಕಾಎಕಿಯಾಗಿ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ್ದಾರೆ. ಇದು ಅತ್ಯಂತ ಖಂಡನೀಯ ಎಂದು ಶಾಸಕ ಡಿ.ಜಿ.ಶಾಂತನಗೌಡ ಹೊನ್ನಾಳಿಯಲ್ಲಿ ಹೇಳಿದ್ದಾರೆ.