ಮುಡಾ ಪ್ರಕರಣ ಸಂಬಂಧ ಎಲ್ಲ ದಾಖಲೆ ನಾನು ನೋಡಿದ್ದೇನೆ. ಇದರಲ್ಲಿ ನಿಯಮ ಉಲ್ಲಂಘಿಸಿರುವುದು ಸ್ಪಷ್ಟವಾಗಿದೆ. ಸಿಎಂ ಸಿದ್ದರಾಮಯ್ಯ ಅವರೇ ಅಕ್ರಮದಲ್ಲಿ ಭಾಗಿಯಾಗಿದ್ದಾರೆ. ಸಿದ್ದರಾಮಯ್ಯ ಜೈಲಿಗೆ ಹೋಗುವ ಪರಿಸ್ಥಿತಿ ಬರಲಿದೆ. ಅವರಿಗೆ ಶಿಕ್ಷೆಯಾಗಲಿದೆ ಎಂದು ಸಂಸದ ಜಗದೀಶ ಶೆಟ್ಟರ್ ಹೇಳಿದರು.
ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧದ ತನಿಖೆಯ ಕುರಿತು ಕಾಂಗ್ರೆಸ್ ಶಾಸಕ ಕೆ.ಹೆಚ್.ಪುಟ್ಟಸ್ವಾಮಿಗೌಡ ಅವರು ತೀವ್ರ ವಾಗ್ದಾಳಿ ನಡೆಸಿದ್ದಾರೆ. ರಾಜ್ಯಪಾಲರ ಕ್ರಮವನ್ನು ಖಂಡಿಸಿರುವ ಅವರು, ಸಿದ್ದರಾಮಯ್ಯ ರಾಜೀನಾಮೆ ನೀಡುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಮುಡಾ 'ಸೈಟು ಅಕ್ರಮ' ಪ್ರಕರಣದಲ್ಲಿ ತನಿಖೆಗೆ ಆದೇಶಿಸಿರುವುದನ್ನು ಪ್ರಶ್ನಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾನೂನು ಹೋರಾಟ ಆರಂಭಿಸಲಿದ್ದಾರೆ.
ಮುಡಾ ಸೈಟ್ ಹಂಚಿಕೆ ಹಗರಣದ ತನಿಖೆಗೆ ರಾಜ್ಯಪಾಲರ ಅನುಮತಿ ನೀಡಿದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆಗೆ ಬಿಜೆಪಿ ಮತ್ತು ಜೆಡಿಎಸ್ ಪ್ರತಿಭಟನೆ ನಡೆಸಲಿವೆ.