ಸಿದ್ದರಾಮಯ್ಯ ವಿರುದ್ಧದ ಷಡ್ಯಂತ್ರಕ್ಕೆ ಸೋಲಾಗಲಿದೆ: ಎಆರ್ಕೆ
Aug 07 2024, 01:01 AM ISTದೇಶ ಕಂಡ ಅಪ್ಪಟ ಹಾಗೂ ಶುದ್ಧ ಹಸ್ತ ರಾಜಕಾರಣಿಗಳಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಒಬ್ಬರಾಗಿದ್ದು, ಇವರ ವಿರುದ್ಧ ಬಿಜೆಪಿ ಹಾಗೂ ಜೆಡಿಎಸ್ ಇಲ್ಲಸಲ್ಲದ ಆರೋಪ ಮಾಡಿ ರೂಪಿಸುತ್ತಿರುವ ಷಡ್ಯಂತ್ರವನ್ನು ಸೋಲಿಸಲು ಎಲ್ಲರೂ ಒಂದಾಗುವ ಕಾಲ ಬಂದಿದೆ. ಆ.೯ ರಂದು ಮೈಸೂರಿನಲ್ಲಿ ನಡೆಯಲಿರುವ ಜನಾಂದೋಲನ ಸಮಾವೇಶಕ್ಕೆ ಲಕ್ಷ ಸಂಖ್ಯೆಯಲ್ಲಿ ಜನರು ಆಗಮಿಸಿ ಯಶಸ್ವಿಗೊಳಿಸಬೇಕು ಎಂದು ಶಾಸಕ ಎ.ಆರ್.ಕೃಷ್ಣಮೂರ್ತಿ ಕರೆ ನೀಡಿದರು.