ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ನಡೆದ ಸ್ಫೋಟ ಪ್ರಕರಣದಲ್ಲಿ ಸುಧಾರಿತ ಸ್ಫೋಟಕಗಳನ್ನು ಬಳಸಲಾಗಿದೆ. ಇದು ಸಣ್ಣ ಪ್ರಮಾಣದ ಸ್ಫೋಟವಾದರೂ ತೀವ್ರತೆ ಪರಿಣಾಮಕಾರಿಯಾಗಿತ್ತು. ತಪ್ಪಿತಸ್ಥರು ಯಾರೇ ಇದ್ದರೂ ಅವರ ವಿರುದ್ಧ ಕಠಿಣ ಕ್ರಮ ಆಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ರಾಜ್ಯದಲ್ಲಿ ಕಾಂಗ್ರೆಸ್ ಶಾಸಕರ ಖರೀದಿಗೆ ಬಿಜೆಪಿ ಪ್ರಯತ್ನ ನಡೆಸುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದ್ದಾರೆ.
‘ಕಾಂಗ್ರೆಸ್‌ನಿಂದ ಗೆದ್ದಿರುವ ಮೂರು ಮಂದಿ ರಾಜ್ಯಸಭೆ ಸಭೆ ಸದಸ್ಯರು ತೆರಿಗೆ ಪಾಲು ಕಡಿತ, ವಿಶೇಷ ಅನುದಾನ ನಿರಾಕರಣೆ, ಅಭಿವೃದ್ದಿ ಯೋಜನೆಗಳಿಗೆ ದೊರಕದ ಅನುದಾನ ಸೇರಿದಂತೆ ಕೇಂದ್ರದಿಂದ ಆಗುತ್ತಿರುವ ಅನ್ಯಾಯಗಳ ವಿರುದ್ಧ ರಾಜ್ಯಸಭೆಯಲ್ಲಿ ಧ್ವನಿ ಎತ್ತಲಿದ್ದಾರೆ’ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.