ಸುರೇಶ ಭೂಮರಡ್ಡಿ ಹೆಗಲಿಗೆ ಜೆಡಿಎಸ್ ಸಾರಥ್ಯ
Feb 06 2024, 01:33 AM ISTಕಾಂಗ್ರೆಸ್ ಪಕ್ಷದ ಕೊಪ್ಪಳ ಬ್ಲಾಕ್ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ ಅನುಭವ ಇರುವ ಸುರೇಶ ಭೂಮರಡ್ಡಿ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ಸೇರ್ಪಡೆಯಾದರು. ಕೊಪ್ಪಳ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಸಿ.ವಿ. ಚಂದ್ರಶೇಖರ ಅವರನ್ನು ಬೆಂಬಲಿಸಿ, ಚುನಾವಣೆಯಲ್ಲಿ ಪಕ್ಷಕ್ಕಾಗಿ ಕೆಲಸ ಮಾಡಿದ್ದರು. ಈಗ ಅವರನ್ನೇ ಪಕ್ಷದ ಜಿಲ್ಲಾಧ್ಯಕ್ಷರನ್ನಾಗಿ ಮಾಡಿರುವುದು ಅಚ್ಚರಿಗೆ ಕಾರಣವಾಗಿದೆ.