ಮಹಾ ಮಳೆಗೆ ನಾಲ್ಕು ಸೇತುವೆ ಜಲಾವೃತ
Jul 09 2024, 12:45 AM ISTಕನ್ನಡಪ್ರಭ ವಾರ್ತೆ ಬೆಳಗಾವಿನೆರೆಯ ಮಹಾರಾಷ್ಟ್ರದ ಪಶ್ಚಿಮ ಘಟ್ಟ ಪ್ರದೇಶದಲ್ಲಿ ಮಳೆ ಮುಂದುವರಿದಿರುವುದರಿಂದ ಚಿಕ್ಕೋಡಿ ಉಪವಿಭಾಗ ವ್ಯಾಪ್ತಿಯಲ್ಲಿ ಜಲಾವೃತಗೊಂಡ ಸೇತುವೆಗಳ ಸಂಖ್ಯೆ ನಾಲ್ಕಕ್ಕೇರಿದೆ. ದೂದಗಂಗಾ ನದಿಯ ಚಿಕ್ಕೋಡಿ ತಾಲೂಕಿನ ಮಲ್ಲಿಕವಾಡ-ದತ್ತವಾಡ, ನಿಪ್ಪಾಣಿ ತಾಲೂಕಿನ ದೂದಗಂಗಾ ನದಿಯ ಕಾರದಗಾ-ಬೋಜ್, ಕುನ್ನೂರ-ಭೋಜವಾಡಿ ಸಂಪರ್ಕಿಸುವ ಸೇತುವೆ ಮತ್ತು ಕೃಷ್ಣಾ ನದಿಗೆ ಅಡ್ಡಲಾಗಿರುವ ಮಾಂಜರಿ - ಭಾವನ ಸೌಂದತ್ತಿ ಸೇತುವೆ ಜಲಾವೃತಗೊಂಡಿವೆ. ಇವು ಕೆಳಹಂತದ ಸೇತುವೆಗಳಾಗಿದ್ದು, ಪರ್ಯಾಯ ಮಾರ್ಗಗಳ ಮೂಲಕ ಜನಸಂಚಾರ ವ್ಯವಸ್ಥೆ ಜಾರಿಯಲ್ಲಿದೆ.