ಪ್ರತಿಯೊಬ್ಬ ರಾಜಕೀಯ ಪ್ರತಿನಿಧಿಯ ಬದುಕಿನಲ್ಲಿ ಕೆಲವೊಂದು ಕ್ಷಣಗಳು ಅಚ್ಚಳಿಯದ ನೆನಪಾಗಿ ಉಳಿಯುತ್ತವೆ. ನಮ್ಮ ಪಾಲಿಗೆ ಅಂಬಾರಗೋಡ್ಲು – ಕಲಸವಳ್ಳಿ – ಸಿಗಂದೂರು ಸೇತುವೆ ನಿರ್ಮಾಣ ಅಂಥದ್ದೊಂದು ಐತಿಹಾಸಿಕ ಸಾಧನೆಯಾಗಿದೆ -ಬಿ.ವೈ. ರಾಘವೇಂದ್ರ
ದೇಶದಲ್ಲಿಯೇ 2ನೇ ಅತಿ ಉದ್ದದ ಕೇಬಲ್ ಆಧಾರಿತ ಸೇತುವೆ ಎಂಬ ಹೆಗ್ಗಳಿಕೆಗೆ ಪಾತ್ರವಾದ ಶರಾವತಿ ಹಿನ್ನೀರು ಭಾಗದ ನಾಗರಿಕರ ದಶಕಗಳ ಕನಸಾದ ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ಸಿಗಂದೂರು ಸೇತುವೆ ಇಂದು ಲೋಕಾರ್ಪಣೆಗೊಳ್ಳಲಿದೆ.
ಶರಾವತಿ ಹಿನ್ನೀರು ಪ್ರದೇಶದ ಮೇಲೆ ಹಾದು ಹೋಗಿರುವ ಹೊಳೆಬಾಗಿಲು-ಕಳಸವಳ್ಳಿ ನಡುವೆ ನಿರ್ಮಾಣಗೊಡಿರುವ ಸಿಗಂದೂರು ಸೇತುವೆಯ ಲೋಕಾರ್ಪಣೆ ಜು.14 ರಂದು ಹಮ್ಮಿಕೊಳ್ಳಲಾಗಿದ್ದು, ಕೇಂದ್ರ ಲೋಕೋಪಯೋಗಿ ಸಚಿವ ನಿತಿನ್ ಗಡ್ಕರಿ, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಉದ್ಘಾಟನೆ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ