ಬಾರೇಹಳ್ಳ ಸೇತುವೆ ಕಾಮಗಾರಿ ಶೀಘ್ರ ಪೂರ್ಣಗೊಳಿಸಿ
Feb 11 2024, 01:46 AM ISTಶಿವಮೊಗ್ಗ ತಾಲೂಕಿನ ಪುರದಾಳು ಗ್ರಾಮಕ್ಕೆ ಶುಕ್ರವಾರ ಭೇಟಿ ನೀಡಿದ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಬಾರೇಹಳ್ಳ ಸೇತುವೆ ನಿರ್ಮಾಣ ಕಾಮಗಾರಿ ಪರಿಶೀಲನೆ ನಡೆಸಿದರು. ಕಾಮಗಾರಿ ಪೂರ್ಣಗೊಳಿಸಲು ಬೇಕಾದ ಅನುದಾವನ್ನು ಶೀಘ್ರದಲ್ಲೇ ಮಂಜೂರು ಮಾಡಲಾಗುವುದು. ಬಾರೇಹಳ್ಳ ಸೇತುವೆ ನಿರ್ಮಾಣದ ಕೊನೆ ಹಂತದ ಕಾಮಗಾರಿ ತ್ವರಿತಗತಿಯಲ್ಲಿ ಪೂರ್ಣಗೊಳಿಸಬೇಕು ಎಂದು ಸಂಬಂಧಿಸಿದ ಅಧಿಕಾರಿಗಳಿಗೆ ಸ್ಥಳದಲ್ಲೇ ಸೂಚನೆ ನೀಡಿದರು.