ತಗ್ಗಿದ ಪ್ರವಾಹ: ಉಗಾರ-ಕುಡಚಿ ಸೇತುವೆ ಸಂಚಾರಕ್ಕೆ ಮುಕ್ತ
Aug 10 2024, 01:32 AM ISTಕನ್ನಡಪ್ರಭ ವಾರ್ತೆ ಕಾಗವಾಡ ಕಳೆದ 12 ದಿನಗಳಿಂದ ಮಹಾರಾಷ್ಟ್ರದಲ್ಲಿ ಸುರಿಯುತ್ತಿರುವ ಮಳೆ ಪ್ರಮಾಣ ಇಳಿಕೆಯಾಗಿದ್ದು, ಉಕ್ಕಿ ಹರಿಯುತ್ತಿದ್ದ ಕೃಷ್ಣೆಯ ಪ್ರವಾಹ ಕೂಡ ತಗ್ಗಿದೆ. ಕರ್ನಾಟಕದಿಂದ ಮಹಾರಾಷ್ಟ್ರಕ್ಕೆ ಸಂಪರ್ಕ ಕಲ್ಪಿಸುವ ಉಗಾರ-ಕುಡಚಿ ಮಾರ್ಗದ ಸೇತುವೆ ಶುಕ್ರವಾರ ಮಧ್ಯಾಹ್ನ ಸಂಚಾರಕ್ಕೆ ಮುಕ್ತಗೊಂಡಿದೆ. ಜನರು ಹಾಗೂ ವಾಹನಗಳ ಸಂಚಾರ ಆರಂಭವಾಗಿದ್ದು, ಜನರು ನಿಟ್ಟುಸಿರುವ ಬಿಟ್ಟಿದ್ದಾರೆ.