ಬಿಜೆಪಿ ಮುಖಂಡ ಎಲ್.ಕೆ. ಅಡ್ವಾಣಿ ಭೇಟಿಗೂ ಮುನ್ನ ಸಂಭವಿಸಿದ್ದ, 58 ಮಂದಿ ಸಾವಿಗೆ ಕಾರಣವಾಗಿದ್ದ 1998ರ ಕೊಯಮತ್ತೂರು ಬಾಂಬ್ ಸ್ಫೋಟದ ಪ್ರಮುಖ ಆರೋಪಿ, ಉಗ್ರ ಸಾದಿಕ್ ಅಲಿಯಾಸ್ ಟೈಲರ್ ರಾಜಾನನ್ನು ಕರ್ನಾಟಕದ ವಿಜಯಪುರದಲ್ಲಿ ತಮಿಳುನಾಡು ಉಗ್ರ ನಿಗ್ರಹ ಪಡೆ (ಎಟಿಎಸ್) ಬಂಧಿಸುವಲ್ಲಿ ಯಶಸ್ವಿಯಾಗಿದೆ.
ಮಲ್ಲೇಶ್ವರಂ ಬಿಜೆಪಿ ಕಚೇರಿ ಸ್ಫೋಟ ಪ್ರಕರಣ ಸಂಬಂಧ ಇತ್ತೀಚೆಗೆ ಬಂಧಿಸಲ್ಪಟ್ಟ ಉಗ್ರ ಅಬೂಬಕ್ಕರ್ ಸಿದ್ದಿಕಿ ಅಂದುಕೊಂಡಿದ್ದಕ್ಕಿಂತಲೂ ದೊಡ್ಡ ‘ಮೀನು’. ಆತ ಎಲೆಕ್ಟ್ರಾನಿಕ್ ಉಪಕರಣ, ಟೈಮರ್‌ಗಳನ್ನು ಬಳಸಿಕೊಂಡು ಸುಧಾರಿತ ಸ್ಫೋಟಕ ತಯಾರಿಯಲ್ಲಿ ಸ್ಪೆಷಲಿಸ್ಟ್ ಆಗಿದ್ದ