ಮಹಾನ್ ನಾಯಕರು ತ್ಯಾಗ, ಬಲಿದಾನದಿಂದ ಸ್ವಾತಂತ್ರ್ಯ: ಶಾಸಕ ಜೆ.ಟಿ. ಪಾಟೀಲ
Jan 27 2024, 01:16 AM ISTಬೀಳಗಿ: ಮಹಾನ್ ನಾಯಕರು ತ್ಯಾಗ, ಬಲಿದಾನ ಮಾಡಿ ಬ್ರಿಟಿಷರ ಕಪಿಮುಷ್ಠಿಯಿಂದ ಬಿಡುಗಡೆಗೊಳಿಸಿ, ಪ್ರಜಾಪ್ರಭುತ್ವದ ಅಡಿಯಲ್ಲಿ ಬದುಕುವಂತೆ ಮಾಡಿದ್ದಾರೆಂದು ಶಾಸಕ ಜೆ.ಟಿ. ಪಾಟೀಲ ಸ್ಮರಿಸಿದರು. ಪಟ್ಟಣದ ತಾಲೂಕು ಆಡಳಿತ ಕಚೇರಿ ಆವರಣದಲ್ಲಿ ತಾಲೂಕು ಆಡಳಿತ, ತಾಪಂ, ಪಟ್ಟಣ ಪಂಚಾಯತಿ ಆಶ್ರಯದಲ್ಲಿ ಹಮ್ಮಿಕೊಂಡಿದ್ದ 75ನೇ ಗಣರಾಜ್ಯೋತ್ಸವ ಸಮಾರಂಭದ ಅಧ್ಯಕ್ಷತೆ ವಹಿಸಿ, ವಿವಿಧ ಕ್ಷೇತ್ರದ ಸಾಧಕರನ್ನು ಸನ್ಮಾನಿಸಿ ಮಾತನಾಡಿದರು.