ಭಾರತದಲ್ಲಿ ಧಾರ್ಮಿಕ ಸ್ವಾತಂತ್ರ್ಯದ ಬಗ್ಗೆ ಅಮೆರಿಕದ ಕೆಲವು ಸಂಘಟನೆಗಳು ವರ್ಷ ವರ್ಷ ಸಲ್ಲದ ಆರೋಪ ಮಾಡುತ್ತಿರುವ ನಡುವೆಯೇ, ಅಮೆರಿಕ ಪ್ರವಾಸದಲ್ಲಿರುವ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ, ‘ಭಾರತದಲ್ಲಿ ಧಾರ್ಮಿಕ ಸ್ವಾತಂತ್ರ್ಯ ಇಲ್ಲ’ ಎಂಬ ಗಂಭೀರ ಆರೋಪ ಮಾಡಿದ್ದಾರೆ