ಬಾಣಾವರ ಗ್ರಾಪಂ ವತಿಯಿಂದ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮ

Aug 17 2024, 12:48 AM IST
ಅರಸೀಕೆರೆ ತಾಲೂಕಿನ ಬಾಣಾವರ ಗ್ರಾಮ ಪಂಚಾಯಿತಿ ವತಿಯಿಂದ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮವನ್ನು ಸರ್ಕಾರಿ ಪದವಿ ಪೂರ್ವ ಕಾಲೇಜಿನ ಆವರಣದಲ್ಲಿ ಹಮ್ಮಿಕೊಳ್ಳಲಾಗಿತ್ತು. ಧ್ವಜಾರೋಹಣವನ್ನು ನೆರವೇರಿಸಿ ಮಾತನಾಡಿದ ಗ್ರಾಪಂ ಅಧ್ಯಕ್ಷೆ ವೀಣಾ ವಿಶ್ವನಾಥ್, ಭಾರತವು ವಿವಿಧತೆಯಲ್ಲಿ ಏಕತೆಯನ್ನು ಕಂಡಂತಹ ರಾಷ್ಟ್ರವಾಗಿದ್ದು ಸ್ವಾತಂತ್ರ್ಯ ಸಂಗ್ರಾಮದಲ್ಲಿ ಹಲವಾರು ಮಹನೀಯರು ಪ್ರಾಣವನ್ನು ತೆತ್ತಿದ್ದಾರೆ. ಹಲವಾರು ಜನರ ಹೋರಾಟದ ಸಂಕೇತವಾಗಿ ನಮಗೆ ಸ್ವಾತಂತ್ರ್ಯ ಲಭಿಸಿದ್ದು ಇಂದು ಭಾರತ ಎಲ್ಲಾ ರಂಗದಲ್ಲೂ ಸಹ ಉತ್ಕೃಷ್ಟತೆಯನ್ನು ಪಡೆದುಕೊಂಡಿದೆ ಹಾಗೂ ಸ್ವಾತಂತ್ರ್ಯವನ್ನು ಗೌರವಿಸುವುದು ಮತ್ತು ದೇಶದ ಏಳಿಗೆಗಾಗಿ ಶ್ರಮಿಸಬೇಕಾಗಿರುವುದು ಪ್ರತಿಯೊಬ್ಬ ಭಾರತೀಯನ ಆದ್ಯ ಕರ್ತವ್ಯವಾಗಿದೆ ಎಂದು ತಿಳಿಸಿದರು.