ಸ್ವಾತಂತ್ರ್ಯ ದಿನಾಚರಣೆಗೆ ಅಗತ್ಯ ಸಿದ್ಧತೆಗೆ ಸೂಚನೆ
Jul 24 2025, 01:45 AM ISTಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮವನ್ನು ಯಾವುದೇ ಲೋಪಗಳಿಲ್ಲದಂತೆ ಅಚ್ಚುಕಟ್ಟಾಗಿ ಸಂಭ್ರಮ, ಸಡಗರದಿಂದ ಆಚರಿಸಲು ಅಗತ್ಯ ಸಿದ್ಧತೆಗೆ ಕ್ರಮ ವಹಿಸುವಂತೆ ಜಿಲ್ಲಾಧಿಕಾರಿ ಲತಾಕುಮಾರಿ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಕಾರ್ಯಕ್ರಮದಲ್ಲಿ ಮಹಾತ್ಮ ಗಾಂಧೀಜಿ ಅವರ ಭಾವಚಿತ್ರದೊಂದಿಗೆ ಸಂವಿಧಾನ ಪಿತಾಮಹ ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರವನ್ನು ಕಡ್ಡಾಯವಾಗಿ ಇಡುವಂತೆ ಸೂಚಿಸಿದರಲ್ಲದೆ, ಎಲ್ಲಾ ಸರ್ಕಾರಿ ಕಟ್ಟಡಗಳಲ್ಲಿ ಆ.೧೪ ಮತ್ತು ೧೫ ರಂದು ತಪ್ಪದೆ ದೀಪಾಲಂಕಾರ ವ್ಯವಸ್ಥೆ ಮಾಡಲು ಅಧಿಕಾರಿಗಳಿಗೆ ಸೂಚಿಸಿದರು.