ಅದಾನಿ ಸಮೂಹವು ವಿದೇಶಗಳಿಂದ ಆಮದು ಮಾಡಿಕೊಂಡ ಕಡಿಮೆ ಗುಣಮಟ್ಟದ ಕಲ್ಲಿದ್ದಲ್ಲನ್ನು, ‘ಉತ್ಕೃಷ್ಟ ಗುಣಮಟ್ಟದ ಕಲ್ಲಿದ್ದಲು’ ಎಂದು ಬಿಂಬಿಸಿ ಅದಾನಿ ಸಮೂಹ ಸಾವಿರಾರು ಕೋಟಿ ರು. ಲಾಭ ಮಾಡಿಕೊಂಡಿದೆ ಎಂದು ಒಸಿಸಿಆರ್ಪಿ ವರದಿ ಆಧರಿಸಿ ‘ಫೈನಾನ್ಷಿಯಲ್ ಟೈಮ್ಸ್’ ಪತ್ರಿಕೆ ವರದಿ ಪ್ರಕಟಿಸಿದೆ.