ರಾಜ್ಯದಲ್ಲಿ ಎಸ್ಕಾಂಗಳು ಕೆಟಿಟಿಪಿ ಕಂಪೆನಿಯ ಜೇಬು ತುಂಬಿಸಲು ಸ್ಮಾರ್ಟ್ ಮೀಟರ್ ಖರೀದಿ ಹಾಗೂ ನಿರ್ವಹಣೆಗೆ ದುಬಾರಿ ದರ ನಿಗದಿ ಮಾಡಿವೆ. ಪರಿಣಾಮ ಎಸ್ಕಾಂಗಳು ಹಾಗೂ ಸಾರ್ವಜನಿಕರಿಗೆ ಸೇರಿದ ಬರೋಬ್ಬರಿ 15,568 ಕೋಟಿ ರು. ಹಣ ಲೂಟಿಯಾಗುತ್ತಿದೆ ಎಂಬ ಗಂಭೀರ ಆರೋಪ ಕೇಳಿ ಬಂದಿದೆ.
ರಾಜ್ಯದಲ್ಲಿ ಹೊಸ ವಿದ್ಯುತ್ ಸಂಪರ್ಕಕ್ಕೆ ಸ್ಮಾರ್ಟ್ ಮೀಟರ್ ಕಡ್ಡಾಯ ಮಾಡುವ ಜತೆಗೆ ಸ್ಮಾರ್ಟ್ ಮೀಟರ್‌ಗಳಿಗೆ ದುಬಾರಿ ದರ ನಿಗದಿ ಮಾಡಿ ಸರ್ಕಾರ ಹಗಲು ದರೋಡೆ ಮಾಡುತ್ತಿದೆ. ಕೆಟಿಟಿಪಿ ನಿಯಮ ಉಲ್ಲಂಘಿಸಿ ಅನರ್ಹರಿಗೆ ಟೆಂಡರ್ ನೀಡಿ 7,500 ಕೋಟಿ ರು. ಬೃಹತ್ ಹಗರಣ
ಭೂಪೇಶ್ ಭಗೇಲ್ ಛತ್ತೀಸ್‌ಗಢ ಸಿಎಂ ಆಗಿದ್ದಾಗ ನಡೆದಿದೆ ಎನ್ನಲಾದ 4000 ಕೋಟಿ ರು. ಮದ್ಯ ಹಗರಣ ಸಂಬಂಧ, ಅವರ ಪುತ್ರ ಚೈತನ್ಯ ಬಘೇಲ್ ಹಾಗೂ ಅವರ ಆಪ್ತರಿಗೆ ಸೇರಿದ 15 ಕಡೆ ಜಾರಿ ನಿರ್ದೇಶನಾಲಯ (ಇ.ಡಿ.) ಸೋಮವಾರ ದಾಳಿ ನಡೆಸಿದೆ. ಈ ವೇಳೆ ಬಘೇಲ್ ಮನೆಯಲ್ಲಿ 32 ಲಕ್ಷ ರು. ನಗದು ವಶಪಡಿಸಿಕೊಳ್ಳಲಾಗಿದೆ.
ಬಹುಕೋಟಿ ವಂಚನೆ ಮಾಡಿದ್ದ ಐಎಂಎ (ಐ-ಮಾನಿಟರಿ ಅಡ್ವೈಸರಿ) ಕಂಪನಿಯ ₹534.5 ಕೋಟಿ ಮೌಲ್ಯದ ಆಸ್ತಿಯನ್ನು ರಾಜ್ಯ ಸರ್ಕಾರ ಮುಟ್ಟುಗೋಲು ಹಾಕಿಕೊಂಡಿದೆ.
ರಾಜ್ಯ ರಾಜಕಾರಣದಲ್ಲಿ ಭಾರೀ ಆರೋಪ-ಪ್ರತ್ಯಾರೋಪಕ್ಕೆ ಕಾರಣವಾಗಿದ್ದ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ (ಪಿಎಸ್‌ಐ) ನೇಮಕಾತಿ ಹಗರಣದಲ್ಲಿ ಬಿಜೆಪಿ ನಾಯಕರ ವಿರುದ್ಧದ ಆರೋಪಗಳಿಗೆ ಯಾವುದೇ ಸಾಕ್ಷ್ಯ ಸಿಗದ ಹಿನ್ನೆಲೆಯಲ್ಲಿ ತನಿಖೆಗೆ ಅಂತ್ಯವಾಡಲು ವಿಶೇಷ ತನಿಖಾ ದಳ (ಎಸ್‌ಐಟಿ) ಮುಂದಾಗಿದೆ.
ಮುಡಾ ನಿವೇಶನ ಹಂಚಿಕೆ ಹಗರಣವು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಮತ್ತಷ್ಟು ಸಂಕಷ್ಟಕ್ಕೀಡು ಮಾಡಿದ್ದು, ಅವರ ಪತ್ನಿ ಪಾರ್ವತಿ ಮತ್ತು ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ಅವರಿಗೆ ಜಾರಿ ನಿರ್ದೇಶನಾಲಯ (ಇ.ಡಿ) ವಿಚಾರಣೆಗೆ ಹಾಜರಾಗುವಂತೆ ಇದೇ ಮೊದಲ ಬಾರಿಗೆ ನೋಟಿಸ್ ಜಾರಿ ಮಾಡಿದೆ.