ಮುಡಾ 50:50 ನಿಯಮದಲ್ಲಿ ಪಡೆದ ಸೈಟ್ ಗಳು ಪರಬಾರೆ ಆಗ್ತಿವೆ. 2020 ರಿಂದ 2024ರ ವರೆಗಿನ ಎಲ್ಲಾ 50:50 ಸೈಟ್ ರದ್ದತಿಗೆ ಮನವಿ ಮಾಡಿದ್ದೇನೆ. ಟೆಕ್ನಿಕಲ್ ಕಮಿಟಿ ವರದಿ ಜಾರಿ ಮಾಡಿ, ಇಬ್ಬರು ಹಿಂದಿನ ಕಮಿಷನರ್ ವಜಾಗೆ ಆಗ್ರಹಿಸಿದ್ದೇನೆ. ಅವರು ಕೂಡ ತನಿಖೆ ನಡೆಯುತ್ತಿದೆ, ಮಾರಾಟಕ್ಕೆ ಅವಕಾಶ ಕೊಡಲ್ಲ.
‘ನಮ್ಮ ಎಲ್ಲಾ ನ್ಯಾಯಾಲಯಗಳ ಮೇಲೆ ಒಂದು ಅತ್ಯುನ್ನತ ನ್ಯಾಯಾಲಯ ಇದೆ. ಅದೇ ಆತ್ಮಸಾಕ್ಷಿ ನ್ಯಾಯಾಲಯ. ಕೆಲವು ಸಾರಿ ನ್ಯಾಯಾಲಯಗಳಲ್ಲಿ ಎಲ್ಲರಿಗೂ ನ್ಯಾಯ ಸಿಗದೆ ಇರಬಹುದು. ಆದರೆ, ನಾವು ಮಹಾತ್ಮ ಗಾಂಧೀಜಿ ಅವರ ಆಶಯದಂತೆ ಆತ್ಮಸಾಕ್ಷಿಗೆ ಅನುಗುಣವಾಗಿ ನಡೆದುಕೊಳ್ಳಬೇಕು.’
ಸುಮಾರು 8 ಸಾವಿರ ಕೋಟಿ ರು. ಮೌಲ್ಯದ ಚುನಾವಣಾ ಬಾಂಡ್ ಹಗರಣದ ಸಂಬಂಧ ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ವಿರುದ್ಧದ ತನಿಖೆಗೆ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿದೆ.
ಜನಪ್ರತಿನಿಧಿಗಳ ನ್ಯಾಯಾಲಯದ ಆದೇಶದ ಮೇರೆಗೆ, 8,000 ಕೋಟಿ ರೂ. ಮೌಲ್ಯದ ಚುನಾವಣಾ ಬಾಂಡ್ ಹಗರಣದಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮತ್ತು ರಾಜ್ಯ ಬಿಜೆಪಿ ಅಧ್ಯಕ್ಷ ವಿಜಯೇಂದ್ರ ಸೇರಿದಂತೆ ಬಿಜೆಪಿ ನಾಯಕರ ವಿರುದ್ಧ ಎಫ್ಐಆರ್ ದಾಖಲಾಗಿದೆ.