ನರಗುಂದ ಗುತ್ತಿಗೆದಾರರ ಹಣ ಪಾವತಿ ವಿಷಯ ಸಿಎಂ ಅಂಗಳಕ್ಕೆ
Oct 25 2023, 01:15 AM IST2022-23ರ ಅವಧಿಯಲ್ಲಿ ನರಗುಂದ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಅನುಷ್ಠಾನವಾಗಿರುವ ವಿವಿಧ ಕಾಮಗಾರಿಗಳು ಸದ್ಯ ಗದಗ ಜಿಲ್ಲೆ ಮಾತ್ರವಲ್ಲ, ರಾಜ್ಯದಲ್ಲಿಯೇ ತೀವ್ರ ಚರ್ಚೆಯ ವಸ್ತುವಾಗಿದೆ. ಬಹುತೇಕ ಕಾಮಗಾರಿಗಳು ಕಳಪೆಯಾಗಿದ್ದು, ಈ ಕುರಿತು ತನಿಖೆ ನಡೆಸುವಂತೆ ಮಾಜಿ ಶಾಸಕ ಬಿ.ಆರ್. ಯಾವಗಲ್ಲ ಅವರು ಮುಖ್ಯಮಂತ್ರಿಗಳನ್ನು ಒತ್ತಾಯಿಸಿದ್ದು, ಕಾಂಗ್ರೆಸ್ ಮತ್ತು ಬಿಜೆಪಿಯಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ.