ಗ್ಯಾರಂಟಿ ಯೋಜನೆಗಳ ಹೆಸರಿನಲ್ಲಿ ದಲಿತರ ಕೋಟ್ಯಂತರ ರು.ಗಳನ್ನು ಕಾಂಗ್ರೆಸ್ ಸರ್ಕಾರ ದುರುಪಯೋಗ ಮಾಡಿಕೊಂಡಿದೆ ಎಂದು ಆರೋಪಿಸಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿ ಸಿ. ಸತ್ಯಭಾಮ ಅವರಿಗೆ ಮನವಿ ಸಲ್ಲಿಸಿದರು.
ದಲಿತ ಸಮುದಾಯಗಳ ಕಲ್ಯಾಣಕ್ಕೆಂದು ಮೀಸಲಾಗಿರುವ ಎಸ್ಸಿ,ಎಸ್ಟಿ-ಟಿಎಸ್ಪಿ ಹಣವನ್ನು ರಾಜ್ಯ ಸರ್ಕಾರ ಪಂಚ ಗ್ಯಾರಂಟಿ ಯೋಜನೆಗಳಿಗೆ ಬಳಕೆ ಮಾಡಿಕೊಳ್ಳುತ್ತಿರುವುದನ್ನು ಖಂಡಿಸಿ ಬಿಜೆಪಿ ಮುಖಂಡರು ಶುಕ್ರವಾರ ಬಳ್ಳಾರಿ, ಉಡುಪಿ, ಚಾಮರಾಜನಗರಗಳಲ್ಲಿ ಪ್ರತಿಭಟನೆ ನಡೆಸಿದರು.