ಅಡಿಕೆ ಬೊಮ್ಮನಹಳ್ಳಿ ಏತನೀರಾವರಿ ಯೋಜನೆಗೆ ಭೂಮಿ ನೀಡಿರುವ ಬಾಕಿ ರೈತರಿಗೆ ಕೂಡಲೇ ಸೂಕ್ತ ಪರಿಹಾರದ ಹಣ ದೊರೆಯಲಿದೆ. ಹಣ ಬಿಡುಗಡೆಯಾಗಿದ್ದು ಭೂಮಿ ನೀಡಿರುವ ರೈತರು ಆತಂಕಪಡುವ ಅಗತ್ಯವಿಲ್ಲ ಎಂದು ಶಾಸಕ ಎ.ಮಂಜು ತಿಳಿಸಿದರು.
ಕೇಂದ್ರ ಸರ್ಕಾರವು ರಾಜ್ಯಕ್ಕೆ ಎನ್ಡಿಆರ್ಎಫ್ ಹಣ ಬಿಡುಗಡೆ ಮಾಡುವಲ್ಲಿ ವಿಳಂಬ ನೀತಿ ಅನುಸರಿಸುತ್ತಿದೆ ಎಂದು ಸಚಿವ ಚಲುವರಾಯಸ್ವಾಮಿ ಆರೋಪಿಸಿದ್ದಾರೆ. ಬಿಜೆಪಿ ಮತ್ತು ಜೆಡಿಎಸ್ ನಾಯಕರು ರಾಜ್ಯದ ಜನರ ಪರವಾಗಿ ನಿಲ್ಲದೆ ಕೇಂದ್ರದ ಮುಂದೆ ಮಂಡಿಯೂರಿದ್ದಾರೆ ಎಂದು ಟೀಕಿಸಿದರು.