ಮನ್ನಾ ಮಾಡಿರುವ ಕೃಷಿ ಸಾಲದ ಬಡ್ಡಿ ಹಣ ಬಿಡುಗಡೆ ಮಾಡಿ: ಕಲ್ಲೂರು ಮೇಘರಾಜ್
Jul 11 2025, 01:47 AM IST ಕೃಷಿ ಸಾಲದ(ಎಂಟಿಎಲ್) ಬಡ್ಡಿ ಹಣವನ್ನು ಮನ್ನಾ ಮಾಡುವುದಾಗಿ ಚುನಾವಣೆ ಸಂದರ್ಭದಲ್ಲಿ ಸಿದ್ಧರಾಮಯ್ಯ ಅವರು ಘೋಷಣೆ ಮಾಡಿದ್ದರಿಂದ ಜಿಲ್ಲೆಯ 144 ರೈತ ಫಲಾನುಭವಿಗಳು ಸಾಲದ ಅಸಲು ಹಣ ಪಾವತಿಸಿದ್ದು, ಕೂಡಲೇ ರಾಜ್ಯ ಸರ್ಕಾರ 2.52 ಕೋಟಿ ರು. ಬಡ್ಡಿ ಹಣವನ್ನು ಶಿವಮೊಗ್ಗ ಡಿಸಿಸಿ ಬ್ಯಾಂಕ್ ಗೆ ಬಿಡುಗಡೆ ಮಾಡಬೇಕು ಎಂದು ಶಾಂತವೇರಿ ಗೋಪಾಲಗೌಡ ಸಮಾಜವಾದಿ ಅಧ್ಯಯನ ಕೇಂದ್ರ ಟ್ರಸ್ಟ್ ವ್ಯವಸ್ಥಾಪಕ ಟ್ರಸ್ಟಿ ಕಲ್ಲೂರು ಮೇಘರಾಜ್ ಒತ್ತಾಯಿಸಿದರು.