ಹಾಸನ- ಮಂಡ್ಯ ಲೋಕಸಭಾ ಕ್ಷೇತ್ರ ಬಿಜೆಪಿಗೆ ಸಿಗುವ ನಿರೀಕ್ಷೆ : ಪ್ರೀತಂಗೌಡ ವಿಶ್ವಾಸ
Feb 05 2024, 01:45 AM ISTಹಿಂದೆ ಹಾಸನ, ಮಂಡ್ಯ ಸೇರಿದಂತೆ ಅನೇಕ ಕ್ಷೇತ್ರಗಳಲ್ಲಿ ಜೆಡಿಎಸ್ ಪ್ರಾಬಲ್ಯವಿದ್ದುದು ನಿಜ. ಆದರೆ, ಮಂಡ್ಯದಲ್ಲಿ ಜೆಡಿಎಸ್ ಗೆದ್ದಿರುವುದು ಈಗ ಒಂದು ಕ್ಷೇತ್ರದಲ್ಲಿ ಮಾತ್ರ. ಬಿಜೆಪಿ ಕೂಡ ಜೆಡಿಎಸ್ನಷ್ಟೇ ಪ್ರಾಬಲ್ಯವನ್ನು ಹೊಂದಿದೆ. ಅದಕ್ಕಾಗಿ ಕಾರ್ಯಕರ್ತರು ಮಂಡ್ಯ ಕ್ಷೇತ್ರಕ್ಕಾಗಿ ಬೇಡಿಕೆ ಇಟ್ಟಿದ್ದಾರೆ. ಕ್ಷೇತ್ರವನ್ನು ಕೇಳುವುದೇ ತಪ್ಪು ಎನ್ನುವುದು ಸರಿಯಲ್ಲ. ಮಂಡ್ಯದ ಬಿಜೆಪಿಯಲ್ಲಿ ಹಲವರು ನಾಯಕರಿದ್ದಾರೆ. ಸುಮಲತಾ ಅವರೂ ಬಿಜೆಪಿಗೆ ಬೆಂಬಲ ನೀಡಿದ್ದಾರೆ.