ಹಾಸನ ಸೇರಿದಂತೆ ಸುತ್ತಮುತ್ತ ಭಾರೀ ಮಳೆ
Oct 23 2024, 12:41 AM ISTಹಾಸನದಲ್ಲಿ ಭಾರಿ ಮಳೆಯಾಗುತ್ತಿದೆ. ಮಹಾಲಕ್ಷ್ಮಿ ಲೇಔಟ್, ಹಾಸನಾಂಬ ಬಡಾವಣೆ, ಉದ್ದೂರು ಹೀಗೆ ಹಲವು ಬಡಾವಣೆಗಳಲ್ಲಿ ನೀರು ತುಂಬಿ ಜಲಾವೃತಗೊಂಡಿದ್ದು, ಇದರಿಂದ ಬಡಾವಣೆ ನಿವಾಸಿಗಳು ಹೊರಬರಲಾರದೆ ಪರದಾಡುವಂತಾಗಿದೆ. ಅಲ್ಲದೆ ರಸ್ತೆಗಳು ಕೂಡ ಸಂಪೂರ್ಣವಾಗಿ ಜಲಾವೃತವಾಗಿ ವಿವಿಧಡೆ ಸಂಪರ್ಕ ಕಡಿತಗೊಂಡಿದೆ ಎಂದು ತಿಳಿಸಿದರು. ರಾಜಕಾಲುವೆ ಒತ್ತುವರಿ ಹಾಗೂ ಅವೈಜ್ಞಾನಿಕ ಬಡಾವಣೆಗಳ ನಿರ್ಮಾಣವೇ ಇದಕ್ಕೆಲ್ಲ ಕಾರಣ ಎಂಬುದು ಸ್ಥಳೀಯರ ಆರೋಪವಾಗಿದೆ.