• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಎಸ್ಸೆಸ್ಸೆಲ್ಸಿಯಲ್ಲಿ ಹಾಸನ ಮೊದಲ ಸ್ಥಾನ ಪಡೆಯಲು ಪ್ರಯತ್ನಿಸಿ

Feb 06 2025, 11:45 PM IST
ಪ್ರಸ್ತುತದಲ್ಲಿ ಸ್ಪರ್ಧೆ ಹೆಚ್ಚಾಗಿ ಇರುವುದರಿಂದ ಮಕ್ಕಳಿಗೆ ಒತ್ತಡ ನೀಡದೆ, ಆತ್ಮಸ್ಥೈರ್ಯ ತುಂಬಬೇಕು. ಪ್ರಾಮಾಣಿಕ ಅಧ್ಯಯನದ ಜೊತೆಗೆ ಉತ್ತಮ ಪರಿಶ್ರಮದ ಮೂಲಕ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶದಲ್ಲಿ ಈ ಬಾರಿ ರಾಜ್ಯದಲ್ಲಿ ಹಾಸನ ಜಿಲ್ಲೆ ಮೊದಲ ಸ್ಥಾನ ಪಡೆಯಲು ಪ್ರಯತ್ನಿಸಿ ಎಂದು ಜಿಲ್ಲಾಧಿಕಾರಿ ಸತ್ಯಭಾಮ ಅವರು ಹೇಳಿದ್ದಾರೆ. ಮಕ್ಕಳಿಗೆ ಮತ್ತಷ್ಟು ಮಾದರಿ ಪರೀಕ್ಷೆಗಳನ್ನು ಮಾಡಿ, ಗಣಿತ, ವಿಜ್ಞಾನ, ಇಂಗ್ಲೀಷ್‌ ವಿಷಯದಂತಹ ಕಷ್ಟವಾಗಿರುವ ವಿಷಯಗಳ ಕಡೆಗೆ ಹೆಚ್ಚು ಗಮನ ಕೊಟ್ಟು, ಪುನರ್ ಮನನ ಮಾಡಿಸಿ ಎಂದು ತಿಳಿಸಿದರು.

ಪ್ಲಾಸ್ಟಿಕ್ ಮುಕ್ತ ಹಾಸನ ನಮ್ಮ ಫುಡ್‌ಪಾರ್ಕಿನ ಮುಂದಿನ ಗುರಿ

Feb 04 2025, 12:31 AM IST
ಫುಡ್ ಪಾರ್ಕಿನ ೨೦೨೫-೨೬ನೇ ಸಾಲಿನ ಗುರಿಗಳು ಎಂದರೇ ಸುಸ್ಥಿರ ವೃತ್ತಾಕಾರದ ಆರ್ಥಿಕತೆ ಪರಿಚಯಿಸುವುದು, ವಿದೇಶಿ ಖರೀದಿದಾರರು ಕಳೆದ ವರ್ಷ ೨೦೨೪ ಡಿಸೆಂಬರ್ ೩೧ ಗುಜರಾತ್ ಜೊತೆ ಮಾಡಿಕೊಂಡಿದ್ದ ಒಪ್ಪಂದಗಳು ಕೊನೆಯಾಗಿದ್ದು, ನಮ್ಮ ಫುಡ್ ಪಾರ್ಕ್ ಜೊತೆ ನೇರ ಖರೀದಿ ಒಪ್ಪಂದ ಮಾಡಿಕೊಂಡಿರುವ ಕಾರಣ ಕೃಷಿ ಆಧಾರಿತ ಕೈಗಾರಿಕೆ ಸ್ಥಾಪನೆ ಮಾಡಿ ತಿಂಗಳಿಗೆ ಕನಿಷ್ಠ ೫ ಕೋಟಿ ಮೊತ್ತದ ಅಂತಾರಾಷ್ಟ್ರೀಯ ಮಾನದಂಡಕ್ಕೆ ಅನುಗುಣವಾಗಿ ಸಿದ್ಧಪಡಿಸಿದ ಆಹಾರ ಸಂಸ್ಕರಣಾ ವಸ್ತುಗಳನ್ನು ರಫ್ತು ಮಾಡುವುದು ಆಗಿದೆ ಎಂದು ಅಶೋಕ್‌ ತಿಳಿಸಿದರು.

ಹಾಸನ ವಿಮಾನ ನಿಲ್ದಾಣದ ಒತ್ತುವರಿಯಾಗಿದ್ದ ಜಾಗ ತೆರವು

Jan 30 2025, 12:34 AM IST
ವಿಮಾನ ನಿಲ್ದಾಣ ಕಾಮಗಾರಿಗೆ ಜಮೀನು ಕಳೆದುಕೊಂಡಿರುವ ಸುಮಾರು ಏಳು ಗ್ರಾಮಗಳ ಗ್ರಾಮಸ್ಥರು ಒಟ್ಟಾಗಿ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಸಿದ್ದಾರೆ.

ಸಮರ ಕಲೆಗಳ ತಜ್ಞ ಹಾಸನ ರಘುಗೆ ಪದ್ಮಶ್ರೀ ಪ್ರಶಸ್ತಿ

Jan 26 2025, 01:34 AM IST
ರಾಮನಗರ: ಸ್ಯಾಂಡಲ್ ವುಡ್ ಮಾತ್ರವಲ್ಲದೆ ಹಾಲಿವುಡ್ ನ ಸಿನಿಮಾಗಳಲ್ಲಿ ಸಾಹಸ ಸಂಯೋಜನೆ ಮಾಡಿರುವ ಡಾ.ಹಾಸನ ರಘು ಅವರು ಪದ್ಮಶ್ರೀ ಪುರಸ್ಕಾರಕ್ಕೆ ಭಾಜನರಾಗಿದ್ದಾರೆ.

ಎಂ. ಚಂದ್ರೇಗೌಡ ಅಧ್ಯಕ್ಷತೆಯಲ್ಲಿ ಹಾಸನ ನಗರಸಭೆ ಬಜೆಟ್ ಪೂರ್ವಭಾವಿ ಸಭೆ

Jan 25 2025, 01:01 AM IST
ನಗರದಲ್ಲಿ ಇರುವ ಶೌಚಾಲಯಗಳ ಬಾಗಿಲನ್ನು ಪ್ರತಿನಿತ್ಯ ತೆಗೆಸಿ ಸಾರ್ವಜನಿಕರ ಅನುಕೂಲಕ್ಕೆ ಮಾಡಿಕೊಡಬೇಕು. ಇನ್ನು ಸಂತೆ ವೇಳೆ ಕರುಗಳನ್ನು ಬಿಟ್ಟು ಹೋಗುತ್ತಿದ್ದು, ಈ ಬಗ್ಗೆ ಸೂಕ್ತ ಕ್ರಮಕೈಗೊಳ್ಳಬೇಕು ಎಂದು ಒತ್ತಾಯಿಸಿದರು. ಇದಕ್ಕೆ ಉತ್ತರಿಸಿದ ನಗರಸಭೆ ಅಧ್ಯಕ್ಷರು, ಈ ಬಗ್ಗೆ ಪರಿಶೀಲಿಸಿ ಮುಂದಿನ ಕ್ರಮಕೈಗೊಳ್ಳುವುದಾಗಿ ತಿಳಿಸಿದರು.

ಹಾಸನ : ಸಂಸದ ಶ್ರೇಯಸ್ ಪಟೇಲ್‌ ವಿರುದ್ಧ ಎಂಎಲ್‌ಸಿ ಡಾ. ಸೂರಜ್‌ ರೇವಣ್ಣ ವಾಗ್ದಾಳಿ

Jan 08 2025, 12:15 AM IST

ಜಿಲ್ಲೆಯ ಸಂಸದರು ದೆಹಲಿಯಲ್ಲಿ ಸಚಿವರಿಗೆ ಕೇವಲ ಮನವಿ ಪತ್ರ ನೀಡಿ ಪ್ರಚಾರ ಗಿಟ್ಟಿಸಿಕೊಳ್ಳುವುದನ್ನು ಬಿಟ್ಟು ನಮ್ಮಂತೆ ಕೆಲಸ ಮಾಡಿ ತೋರಿಸಲಿ ಎಂದು ಸಂಸದ ಶ್ರೇಯಸ್ ಎಂ. ಪಟೇಲ್ ವಿರುದ್ಧ ಎಂಎಲ್‌ಸಿ ಡಾ. ಸೂರಜ್‌ ರೇವಣ್ಣ ಸವಾಲು ಹಾಕಿದರು.

ಹಾಸನ ಜಿಲ್ಲೆಗೆ ಡಾ.ಹೆಬ್ಬಾರ್ ಅನುಪಮ ಸೇವೆ: ಡಾ. ನಿಶ್ಚಲಾನಂದನಾಥ ಸ್ವಾಮೀಜಿ ಬಣ್ಣನೆ

Jan 05 2025, 01:35 AM IST

ಸಾಧ್ಯವಾದರೆ ಒಳ್ಳೆಯದನ್ನು ಮಾಡಿ, ಅವಕಾಶ ಸಿಗದಿದ್ದರೆ ಉತ್ತಮ ಕೆಲಸ ಮಾಡುವವರ ಜೊತೆ ಕೈಜೋಡಿಸಿ ಎಂದು ವಿಶ್ವ ಒಕ್ಕಲಿಗರ ಮಹಾ ಸಂಸ್ಥಾನ ಮಠದ ಕೆಂಗೇರಿಯ ಡಾ. ನಿಶ್ಚಲಾನಂದನಾಥ ಮಹಾಸ್ವಾಮೀಜಿ ತಿಳಿಸಿದರು.

ಹಾಸನ : ಎಂಎಲ್‌ಸಿ ಸೂರಜ್‌ ರೇವಣ್ಣ ವಿರುದ್ಧ ಸಂಸದ ಶ್ರೇಯಸ್ ಎಂ. ಪಟೇಲ್ ತಿರುಗೇಟು

Jan 04 2025, 12:33 AM IST

ಎರಡು ಮೂರು ಬಾರಿ ಸಚಿವರು, ಐದಾರು ಬಾರಿ ಶಾಸಕರಾಗಿರುವವರ ರೀತಿ ಮಾತನಾಡಿದ್ದಾರೆ. ಜೊತೆಗೆ ವಾಗ್ಮಿ, ದೊಡ್ಡ ಮೇಧಾವಿಗಳ ಥರ ಮಾತನಾಡಿದ್ದಾ   ಎಂದು ಎಂಎಲ್‌ಸಿ ಸೂರಜ್‌ ರೇವಣ್ಣ ವಿರುದ್ಧ ಸಂಸದ ಶ್ರೇಯಸ್‌ ಪಟೇಲ್‌ ವಾಗ್ದಾಳಿ ನಡೆಸಿದ್ದಾರೆ.

ಹಾಸನ ಸಾಹಿತ್ಯೋತ್ಸವದ ಯಶಸ್ಸಿಗೆ ಸಹಕರಿಸುವಂತೆ ಮನವಿ

Jan 04 2025, 12:31 AM IST
ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಘಟಕದಿಂದ ಜ.6 ಮತ್ತು 7ರಂದು ಆಯೋಜನೆಗೊಳ್ಳುತ್ತಿರುವ ಹಾಸನ ಸಾಹಿತ್ಯೋತ್ಸವ-೨೦೨೫ಕ್ಕೆ ಚನ್ನರಾಯಪಟ್ಟಣ ತಾಲೂಕಿನ ಪರಿಷತ್ತಿನ ಅಜೀವ ಸದಸ್ಯರು, ಕನ್ನಡಪರ ಸಂಘಟನೆಗಳು, ಸಾಹಿತಿಗಳು, ಶಿಕ್ಷಕರು, ನೌಕರರು, ಸೇರಿದಂತೆ ಎಲ್ಲ ಕನ್ನಡ ಮನಸುಗಳು ಆಗಮಿಸಿ ಸಾಹಿತ್ಯೋತ್ಸವವನ್ನು ಯಶ್ವಸಿಗೊಳಿಸಬೇಕೆಂದು ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಹಡೇನಹಳ್ಳಿ ಲೋಕೇಶ್ ಮನವಿ ಮಾಡಿದರು. ಎರಡು ದಿನಗಳು ಜಿಲ್ಲಾ ಕೇಂದ್ರದಲ್ಲಿ ನಡೆಯುವ ಸಾಹಿತ್ಯೋತ್ಸವವು ಹಾಸನಾಂಬ ಕಲಾಕ್ಷೇತ್ರದಲ್ಲಿ ನಡೆಯಲಿದೆ.

ಹಾಸನ : ಖಾಸಗಿ ಹೋಟೆಲೊಂದರಲ್ಲಿ ಹೊಸ ವರ್ಷದ ಹಿಂದಿನ ರಾತ್ರಿ ಪ್ರಿಯಕರನಿಗೆ ಚಾಕು ಹಾಕಿದ ಪ್ರೇಯಸಿ ಬಂಧನ

Jan 03 2025, 12:33 AM IST

ಹಾಸನ ನಗರದ ಖಾಸಗಿ ಹೋಟೆಲೊಂದರಲ್ಲಿ ಹೊಸ ವರ್ಷದ ಹಿಂದಿನ ರಾತ್ರಿ ಮನು ಕುಮಾರ್‌ ಎಂಬಾತನಿಗೆ ಚಾಕು ಚುಚ್ಚಿದ ಆತನ ಪ್ರೇಯಸಿ ಭವಾನಿಯನ್ನು ಬಂಧಿಸಲಾಗಿದೆ ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಮೊಹಮ್ಮದ್‌ ಸುಜೀತಾ ಮಾಹಿತಿ ನೀಡಿದರು.  

  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • ...
  • 17
  • next >

More Trending News

Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved