ಇಂದಿನಿಂದ ಶ್ರೀ ಹಾಸನಾಂಬೆ ದೇವಿ ದರ್ಶನ

Oct 09 2025, 02:00 AM IST
ಶ್ರೀ ಹಾಸನಾಂಬೆ ದೇವಿ ದರ್ಶನ ಮತ್ತು ಶ್ರೀ ಸಿದ್ದೇಶ್ವರ ಸ್ವಾಮಿ ಜಾತ್ರಾ ಮಹೋತ್ಸವ ಇಂದಿನಿಂದ (ಅ.9) ಪ್ರಾರಂಭವಾಗಲಿದೆ. ಮಧ್ಯಾಹ್ನ 12 ಗಂಟೆಗೆ ಶ್ರೀ ಹಾಸನಾಂಬ ದೇವಿಯ ದೇವಾಲಯದ ಬಾಗಿಲನ್ನು ತೆರೆಯಲಾಗುತ್ತದೆ. ಅ.23ರಂದು ದೇವಾಲಯದ ಬಾಗಿಲನ್ನು ಮುಚ್ಚಲಾಗುತ್ತದೆ. ಭಕ್ತರಿಗೆ ಅ.10ರಿಂದ ಅ.23ರವರೆಗೆ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗಿದೆ. ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಶ್ರೀ ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿ, ತುಮಕೂರು ಶ್ರೀ ಸಿದ್ಧಗಂಗಾ ಮಠದ ಶ್ರೀ ಸಿದ್ಧಲಿಂಗ ಮಹಾಸ್ವಾಮಿಗಳು ಕಾರ್ಯಕ್ರಮ ಉದ್ಘಾಟನೆ ಮಾಡಲಿದ್ದಾರೆ. ಅ.೧೦ರಿಂದ ಅ.೧೭ ರವರೆಗೆ ಬೆ.೧೦ ರಿಂದ ಮ.೦೧ ಗಂಟೆಯವರೆಗೆ ಮಾತ್ರ ಶಿಷ್ಟಾಚಾರ ದರ್ಶನಕ್ಕೆ ಅವಕಾಶವಿರುತ್ತದೆ. ಅ.18ರಿಂದ ಅ.22ರವರೆಗೆ ಯಾವುದೇ ರೀತಿಯ ಶಿಷ್ಟಾಚಾರ ದರ್ಶನಕ್ಕೆ ಅವಕಾಶ ಇರುವುದಿಲ್ಲ.

ಹಾಸನಾಂಬೆ ಉತ್ಸವ ಟೆಂಡರ್‌ನಲ್ಲಿ ಭಾರಿ ಅಕ್ರಮ

Oct 04 2025, 12:00 AM IST
ಜಿಲ್ಲೆಯ ಅಧಿದೇವತೆ ಹಾಸನಾಂಬೆ ಹಾಗೂ ಶ್ರೀ ಸಿದ್ದೇಶ್ವರ ಜಾತ್ರಾ ಮಹೋತ್ಸವ ಆಯೋಜನೆಯಲ್ಲಿ ಜಿಲ್ಲಾಡಳಿತದಿಂದ ಪಾರದರ್ಶಕ ಕೆಲಸ ನಡೆಯುತ್ತಿಲ್ಲ ಎಂದು ಬಿಜೆಪಿ ಮುಖಂಡ ದೇವರಾಜೇಗೌಡ ಆರೋಪಿಸಿದ್ದಾರೆ. ಈ ಬಾರಿ ವಿಐಪಿ, ವಿವಿಐಪಿ ಪಾಸ್‌ಗಳನ್ನು ರದ್ದುಪಡಿಸಿ ಗೋಲ್ಡನ್ ಪಾಸ್ ವಿತರಿಸುವ ನಿರ್ಧಾರ ತೆಗೆದುಕೊಳ್ಳಲಾಗಿದೆ. ಆದರೆ ಈ ಪ್ರಕ್ರಿಯೆಯಲ್ಲೂ ಪಾರದರ್ಶಕತೆ ಇಲ್ಲ. ಯಾರಿಗೆ ಪಾಸ್ ನೀಡಲಾಗುತ್ತಿದೆ ಎಂಬುದನ್ನು ಸಾರ್ವಜನಿಕವಾಗಿ ಪ್ರಕಟಿಸಬೇಕು ಎಂದು ಒತ್ತಾಯಿಸಿದರು. ಪ್ರತಿದಿನ 1 ಸಾವಿರ ಪಾಸ್ ವಿತರಣೆ, ಒಟ್ಟು 18 ಸಾವಿರ ಪಾಸ್ ಮುದ್ರಣಕ್ಕೆ ನಿರ್ಧಾರ ಮಾಡಲಾಗಿತ್ತು. ಆದರೆ ಈಗಾಗಲೇ 40 ಸಾವಿರ ಪಾಸ್ ಮುದ್ರಿಸಲಾಗಿದೆ ಎಂದು ಆರೋಪಿಸಿದರು.