ಮೂರು ಕ್ಷೇತ್ರಗಳಲ್ಲೂ ಹಿಂದುಳಿದ ವರ್ಗಗಳ ಬೆಂಬಲದಿಂದ ಕಾಂಗ್ರೆಸ್‌ಗೆ ಗೆಲುವು
Nov 29 2024, 01:04 AM ISTಉಪಚುನಾವಣೆಯಲ್ಲಿ ಹಿಂದುಳಿದ ವರ್ಗಗಳ ಮತದಾರರೇ ನಿರ್ಣಾಯಕರಾಗಿದ್ದು, ಅವರ ಬೆಂಬಲದಿಂದಲೇ ಕಾಂಗ್ರೆಸ್ ಪಕ್ಷಕ್ಕೆ ಗೆಲುವಾಗಿದೆ ಎಂದು ಹಾಸನ ಜಿಲ್ಲಾ ಕಾಂಗ್ರೆಸ್ ಒಬಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ತಾಲೂಕು ಪಂಚಾಯಿತಿ ಕೆಡಿಪಿ ಸದಸ್ಯ ಮಹೇಶ್ ಕಬ್ಬಾಳು ತಿಳಿಸಿದ್ದಾರೆ. ಚನ್ನಪಟ್ಟಣದಲ್ಲಿ ಒಕ್ಕಲಿಗರು ಒಂದು ಲಕ್ಷಕ್ಕೂ ಹೆಚ್ಚಿದ್ದರೂ ಸಹ, ಮುಸ್ಲಿಂ, ದಲಿತ, ಕುರುಬ, ತಿಗಳ, ನೇಕಾರ, ಬಲಿಜ, ಮಡಿವಾಳ, ಬೆಸ್ತ ಹೀಗೆ ಅಹಿಂದ ಮತಗಳು ಒಂದು ಲಕ್ಷಕ್ಕೂ ಹೆಚ್ಚಿನ ಪ್ರಮಾಣದಲ್ಲಿವೆ.