ಹಿಂದೂ ಧರ್ಮದ ಮೇಲಿನ ಅಪಪ್ರಚಾರ ಬೇಸರ ತಂದಿದೆ
Aug 11 2025, 12:30 AM IST ನಮ್ಮ ಧರ್ಮ, ಸಂಸ್ಕೃತಿಯ ರಕ್ಷಣೆ ಮಾಡಬೇಕಾಗಿರುವುದು ಪ್ರತಿಯೊಬ್ಬರ ಕರ್ತವ್ಯವಾಗಿದೆ. ಹಿಂದೂ ಧರ್ಮ ಹಾಗೂ ಧರ್ಮಕ್ಕೆ ಸಂಬಂಧಿಸಿದ ಪವಿತ್ರವಾದ ಸ್ಥಳಗಳು, ವ್ಯಕ್ತಿಗಳ ಮೇಲೆ ನಿರಂತರವಾಗಿ ಅಪಪ್ರಚಾರ ಮಾಡಲಾಗುತ್ತಿದೆ. ಅದರಲ್ಲೂ ಪವಿತ್ರವಾದ ಧರ್ಮಸ್ಥಳ ಕ್ಷೇತ್ರ ಹಾಗೂ ಅಲ್ಲಿನ ಧರ್ಮಾಧಿಕಾರಿಗಳ ಮೇಲೆ ಹೆಚ್ಚಿನ ಅಪಪ್ರಚಾರ ಮಾಡುತ್ತಿರುವುದು ಖಂಡನೀಯ, ಈ ನಿಟ್ಟಿನಲ್ಲಿ ಮುಂದಿನ ದಿನಗಳಲ್ಲಿ ನಾವೆಲ್ಲಾ ಒಗ್ಗೂಡಿ ಹಿಂದೂ ಧರ್ಮದ ವಿರುದ್ಧ ಅಪಪ್ರಚಾರ ಮಾಡುವವರಿಗೆ ತಕ್ಕ ಪಾಠ ಕಲಿಸಬೇಕು ಎಂದು ಹೇಳಿದರು.