ಉಜಿರೆ-ಪೆರಿಯಶಾಂತಿ ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಟೆಂಡರ್ ಪ್ರಕ್ರಿಯೆ ಪೂರ್ಣ
Feb 14 2025, 12:30 AM ISTಕೇಂದ್ರ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ ರಾಷ್ಟ್ರೀಯ ಹೆದ್ದಾರಿ 73ರ ಉಜಿರೆ-ಪೆರಿಯಶಾಂತಿ ರಸ್ತೆ ಅಗಲೀಕರಣ ಕಾಮಗಾರಿಯ ಟೆಂಡರ್ ಪ್ರಕ್ರಿಯೆ ಮುಗಿಸಿದ್ದು ಮುಗ್ರೋಡಿ ಕನ್ಸ್‌ಸ್ಟ್ರಕ್ಷನ್‌ಗೆ ರಸ್ತೆ ನಿರ್ಮಾಣದ ಜವಾಬ್ದಾರಿ ವಹಿಸಿದೆ. ಹೆದ್ದಾರಿ ಸಚಿವಾಲಯ 613.65 ಕೋಟಿ ರು. ಅನುದಾನವಿಟ್ಟಿದ್ದು ರಸ್ತೆ ನಿರ್ಮಾಣಕ್ಕೆ ಮುಗೇರೋಡಿ ಸಂಸ್ಥೆ 315 ಕೋಟಿ ರು.ಗೆ ಟೆಂಡರ್ ಹಾಕಿ ಕಾಮಗಾರಿಯ ಜವಾಬ್ದಾರಿ ವಹಿಸಿಕೊಂಡಿದೆ.