ಉಪ್ಪಿನಂಗಡಿ: ಹೆದ್ದಾರಿ ತಡೆಗೋಡೆ ಸುರಕ್ಷತೆಗೆ ಖಾತರಿ ಬೇಕಿದೆ!
Aug 13 2024, 12:50 AM ISTರಾಷ್ಟ್ರೀಯ ಹೆದ್ದಾರಿ ಚತುಷ್ಪಥ ಕಾಮಗಾರಿ ಪ್ರಯುಕ್ತ ಉಪ್ಪಿನಂಗಡಿಯ ಹೃದಯ ಭಾಗದಲ್ಲಿ ಹೆದ್ದಾರಿಯ ಉಭಯ ಪಾರ್ಶ್ವದಲ್ಲಿ ಹಲವು ಅಡಿ ಎತ್ತರದ ಕಾಂಕ್ರೀಟ್ ತಡೆಗೋಡೆ ನಿರ್ಮಾಣವಾಗುತ್ತಿವೆ. ಉಪ್ಪಿನಂಗಡಿ ಸನಿಹದಲ್ಲೇ ಎರಡು ತಡೆಗೋಡೆಗಳು ನಿರ್ಮಾಣದ ಬೆನ್ನಿಗೆಯೇ ಮುರಿದು ಬಿದ್ದ ಕಹಿ ಘಟನಾವಳಿಗಳು ನಡೆದಿದ್ದು, ಅದರ ಪರಿಣಾಮ ಈಗ ನಿರ್ಮಾಣವಾಗುತ್ತಿರುವ ಈ ತಡೆಗೋಡೆಯ ಬಗ್ಗೆಯೂ ಜನರ ಮನದಲ್ಲಿ ಭೀತಿ ಮೂಡಿದೆ.