ಸಂಪುಟ ಪುನಾರಚನೆ ಕುರಿತಂತೆ ಚರ್ಚೆ ನಡೆಯುತ್ತಿದ್ದು, ವರಿಷ್ಠರು ತೆಗೆದುಕೊಳ್ಳುವ ನಿರ್ಧಾರವೇ ಅಂತಿಮವಾಗಲಿದೆ. ದೆಹಲಿಯಿಂದ ಪಟ್ಟಿ ಬಂದರೆ ಕಥೆ ಮುಗಿಯಿತು. ಮನೆ ಖಾಲಿ ಮಾಡಿಕೊಂಡು ಹೋಗಬೇಕು ಅಷ್ಟೇ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದ್ದಾರೆ
ದಲಿತ ಸಚಿವರ ಸರಣಿ ಸಭೆ ಸೇರಿದಂತೆ ಮುಖ್ಯಮಂತ್ರಿ ಬದಲಾವಣೆ ಗುಮಾನಿ ಹುಟ್ಟುವಂಥ ರಾಜಕೀಯ ಚಟುವಟಿಕೆಯಲ್ಲಿ ಹಿರಿಯ ಸಚಿವರೇ ತೊಡಗಿರುವ ಬಗ್ಗೆ ಹೈಕಮಾಂಡ್ ಅಸಮಾಧಾನ
ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವ ರಾಜ್ಯಪಾಲರ ವಿರುದ್ಧ ರಾಜ್ಯಾದ್ಯಂತ ಹೋರಾಟ ರೂಪಿಸುವ ಜತೆಗೆ ರಾಷ್ಟ್ರ ಮಟ್ಟದಲ್ಲೂ ಪ್ರಬಲ ಹೋರಾಟ ನಡೆಸಲು ದೆಹಲಿಯಲ್ಲಿ ಶುಕ್ರವಾರ ನಡೆದ ಎಐಸಿಸಿ ವರಿಷ್ಠರ ಸಭೆಯಲ್ಲಿ ತೀರ್ಮಾನಿಸಲಾಗಿದೆ.
ನಾನು ಮುಖ್ಯಮಂತ್ರಿಯಾಗಿ ಮುಂದುವರಿಯಬೇಕೇ ಬೇಡವೇ ಎಂಬುದು ಪಕ್ಷದ ಹೈಕಮಾಂಡ್ ಏನು ನಿರ್ಧರಿಸುತ್ತದೆ ಎಂಬುದರ ಮೇಲೆ ಅವಲಂಬಿತವಾಗಿರುತ್ತದೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.