ಹೈಕೋರ್ಟ ಆದೇಶ: ಚಿಕ್ಕಬಳ್ಳಾಪುರಕ್ಕೆ ಪ್ರತ್ಯೇಕ ಹಾಲು ಒಕ್ಕೂಟ
Oct 25 2024, 12:54 AM IST‘ಬೆಟ್ಟ ಅಗೆದು ಇಲಿ ಹಿಡಿದರು’ ಎಂಬಂತೆ ರಾಜಕೀಯ ಸ್ವಾರ್ಥಕ್ಕಾಗಿ ಹಾಗೂ ದ್ವೇಷ ರಾಜಕಾರಣಕ್ಕಾಗಿ 17 ತಿಂಗಳ ಹಿಂದೆ ಪ್ರತ್ಯೇಕ ಹಾಲು ಒಕ್ಕೂಟ ರಚನೆಯ ಆದೇಶವನ್ನು ಕಾಂಗ್ರೆಸ್ ಸರ್ಕಾರ ರದ್ದುಪಡಿಸಿತ್ತು. ಈಗ ನ್ಯಾಯಾಲಯದಲ್ಲಿ ಕೋಚಿಮುಲ್ ಹಾಲು ಒಕ್ಕೂಟವನ್ನು ವಿಭಜನೆ ಮಾಡಿದ್ದ ಆದೇಶವೇ ಸರಿ ಇದೆ ಎಂದು ಹೈಕೋರ್ಟ್‌ನಲ್ಲಿ ಸರ್ಕಾರ ಒಪ್ಪಿಕೊಂಡಿದೆ.