ಕೆಳ ಹಂತದ ನ್ಯಾಯಾಲಯಗಳಿಗೆ ಸುಪ್ರೀಂ ಸೇವಾ ನಿಯಮ ರೂಪಿಸುವುದಕ್ಕೆ ದಶಕಗಳಿಂದಲೂ ಇರುವ ಆಕ್ಷೇಪ ಮತ್ತೊಮ್ಮೆ ಭುಗಿಲೆದ್ದಿದ್ದು, ‘ಜಿಲ್ಲಾ ನ್ಯಾಯಾಂಗ ನಮ್ಮ ವ್ಯಾಪ್ತಿಗೆ ಬರುತ್ತದೆ. ನೀವು ಅದರಿಂದ ದೂರವಿರಿ’ ಎಂದು ಅಲಹಾಬಾದ್ ಹೈಕೋರ್ಟ್ ಸುಪ್ರೀಂಕೋರ್ಟ್ಗೆ ಸಲಹೆ ನೀಡಿದೆ.
ಬೈಕ್ ಟ್ಯಾಕ್ಸಿ ಸಂಚಾರಕ್ಕೆ ಅವಕಾಶ ಮಾಡಿಕೊಡಲು ನೀತಿ ರೂಪಿಸಲು ಒಂದು ತಿಂಗಳು ಕಾಲಾವಕಾಶ ನೀಡಿದರೂ ಕ್ರಮ ಕೈಗೊಳ್ಳದ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿರುವ ಹೈಕೋರ್ಟ್, ಬೈಕ್ ಟ್ಯಾಕ್ಸಿಗೆ ವಿಧಿಸಿರುವ ನಿರ್ಬಂಧಕ್ಕೆ ತಡೆ ನೀಡುವ ಬಗ್ಗೆ ಪರಿಶೀಲಿಸುತ್ತಿರುವುದಾಗಿ ಮೌಖಿಕವಾಗಿ ತಿಳಿಸಿದೆ.
ಬೆಂಗಳೂರು : ರಾಜ್ಯದಲ್ಲಿ ಕಳೆದ ಸೋಮವಾರದಿಂದ ಆರಂಭವಾಗಿರುವ ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಸಮೀಕ್ಷೆ ಮುಂದುವರಿಸಲು ಹೈ ಕೋರ್ಟ್ ಗುರುವಾರ ತಡೆಯಾಜ್ಞೆ ನೀಡಲು ನಿರಾಕರಿಸಿ ಹಸಿರು ನಿಶಾನೆ ತೋರಿದೆ.